ಜಿಲ್ಲಾ ಆಸ್ಪತ್ರೆಯಲ್ಲಿ ಡೇ ಕೇರ್ ಕಿಮೋಥೆರಪಿ ಕೇಂದ್ರ ಉದ್ಘಾಟನೆ

17 Dwd 4
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ನಗರದ ಜಿಲ್ಲಾ ಆಸ್ಪತ್ರೆಯಲ್ಲಿ ಡೇ ಕೇರ್ ಕಿಮೋಥೆರಪಿ ಕೇಂದ್ರವನ್ನು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಸೋಮವಾರ ಸಂಜೆ ಉದ್ಘಾಟಿಸಿದರು.

ಈ ವೇಳೆ ಮಾತನಾಡಿದ ಅವರು, ಹುಬ್ಬಳ್ಳಿಯ ಎಚ್‌ಸಿಜಿ ಒಡಂಬಡಿಕೆಯೊ0ದಿಗೆ ಪ್ರತಿ ಬುಧವಾರ ತಜ್ಞ ವೈದ್ಯರಿಂದ ಕ್ಯಾನ್ಸರ್ ರೋಗಿಗಳನ್ನು ಜಿಲ್ಲಾಸ್ಪತ್ರೆಯಲ್ಲಿ ಪರೀಕ್ಷಿಸಲಾಗುವುದು. ಇದರಿಂದ ಚಿಕಿತ್ಸೆಗಾಗಿ ದೂರದ ಊರುಗಳಿಗೆ ಹೋಗುವ ಸಮಸ್ಯೆ ತಪ್ಪಲಿದೆ. ಅಗತ್ಯವಿದ್ದರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಜಿಲ್ಲಾಽಕಾರಿ ದಿವ್ಯ ಪ್ರಭು, ಜಿಲ್ಲಾ ಪಂಚಾಯಿತಿ ಸಿಇಒ ಭುವನೇಶ ಪಾಟೀಲ, ಜಿಲ್ಲಾ ಶಸ್ತçಚಿಕಿತ್ಸಕ ಡಾ. ಸಂಗಪ್ಪ ಗಾಬಿ, ಡಾ. ಗಿರಿಜಾತಾಯಿ ಜಿ.ಎಚ್., ಡಾ. ಮಯೂರ ಕದಂ, ಡಾ. ಎಸ್.ಎಂ. ಸಾಂಬ್ರಾಣಿ, ವಿಜಯಕುಮಾರ ಮಳಗಿ, ವೈ.ಎಚ್. ಬನಸೋಡೆ, ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net