ಅಂಗನವಾಡಿ ಕಾರ್ಯಕರ್ತೆ ಮಕ್ಕಳಿಗೆ ಎರಡನೇ ತಾಯಿ : ಅಶೋಕ್ ರೈ ಅಭಿಪ್ರಾಯ

New Project (26)
Published on

ವಿಜಯವಾಣಿ ಸುದ್ದಿಜಾಲ ಪುತ್ತೂರು ಗ್ರಾಮಾಂತರ

ಅಂಗನವಾಡಿ ಕಾರ್ಯಕರ್ತೆಯರು ಎರಡನೇ ತಾಯಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವುದು ಪುಟಾಣಿ ಮಕ್ಕಳ ಪಾಲಿಗೆ ವರದಾನ. ಗ್ರಾಮೀಣ ಪ್ರದೇಶದ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಅಂಗನವಾಡಿ ಕೇಂದ್ರಗಳಲ್ಲಿಯೂ ಎಲ್‌ಕೆಜಿ ಮತ್ತು ಯುಕೆಜಿ ತರಗತಿ ಆರಂಭಿಸುವ ಕುರಿತು ಸರ್ಕಾರ ಚಿಂತನೆ ನಡೆಸಿದ್ದು, ಪುತ್ತೂರು ತಾಲೂಕಿನ ಕೆಲವೊಂದು ಅಂಗನವಾಡಿ ಕೇಂದ್ರಗಳನ್ನು ಈಗಾಗಲೇ ಆಯ್ಕೆ ಮಾಡಲಾಗಿದೆ ಎಂದು ಶಾಸಕ ಅಶೋಕ್‌ಕುಮಾರ್ ರೈ ಹೇಳಿದರು.

ಪಾಣಾಜೆ ಗ್ರಾಮದ ದೇವಸ್ಯ ಅಂಗನವಾಡಿ ಕೇಂದ್ರ ಕಟ್ಟಡ ಉದ್ಘಾಟಿಸಿ ಮಾತನಾಡಿದರು.

ಪುತ್ತೂರು ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪ್ರಿಯಾ ಅಗ್ನೇಶ್ ಮಾತನಾಡಿದರು. ಪಾಣಾಜೆ ಗ್ರಾಪಂ ಅಧ್ಯಕ್ಷೆ ಮೈಮುನತುಲ್ ಮೆಹ್ರಾ ಅಧ್ಯಕ್ಷತೆ ವಹಿಸಿದ್ದರು. ಗ್ರಾಪಂ ಉಪಾಧ್ಯಕ್ಷೆ ಜಯಶ್ರೀ, ಪಿಡಿಒ ಆಶಾ, ಸದಸ್ಯ ಸುಭಾಷ್ ರೈ ಸಿ.ಎಚ್., ಮಾಜಿ ಉಪಾಧ್ಯಕ್ಷ ಅಬೂಬಕ್ಕರ್, ಸ್ಥಳೀಯರಾದ ಬಾಬು ರೈ ಕೋಟೆ, ವಿಶ್ವನಾಥ ರೈ, ಮೋಹನ್ ನಾಯ್ಕ, ಸದಾಶಿವ ರೈ ಸೂರಂಬೈಲು, ವಿಮಲಾ ಮಹಾಲಿಂಗ ನಾಯ್ಕ, ಸುಧಾಕರ ರೈ ಗಿಳಿಯಾಲು, ಸದಾನಂದ ನಾಯ್ಕ ಭರಣ್ಯ ಮತ್ತಿತರರಿದ್ದರು.

ದೇವಸ್ಯ ಅಂಗನವಾಡಿ ಕೇಂದ್ರ ನಿವೃತ್ತ ಕಾರ್ಯಕರ್ತೆ ಗ್ರೇಸಿ ಅವರನ್ನು ಸನ್ಮಾನಿಸಲಾಯಿತು. ಯುವ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ ಶ್ರೀಪ್ರಸಾದ್ ಪಾಣಾಜೆ ಸ್ವಾಗತಿಸಿದರು. ಅಂಗನವಾಡಿ ಕಾರ್ಯಕರ್ತೆ ಸವಿತಾ ಕಾರ್ಯಕ್ರಮ ನಿರೂಪಿಸಿದರು.

ಪುತ್ತೂರು ತಾಲೂಕಿನ 199 ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸುವ ಪ್ರಕ್ರಿಯೆ ನಡೆಯುತ್ತಿದೆ. ಮುಂದಿನ ದಿನಗಳಲ್ಲಿ ಅಂಗನವಾಡಿ ಕೇಂದ್ರಗಳಿಗೆ ಟಿವಿ ವ್ಯವಸ್ಥೆ ಹಾಗೂ ಮಕ್ಕಳಿಗೆ ಸಮವಸ್ತ್ರ ವಿತರಿಸುವ ಕಾರ್ಯ ಆಗಲಿದೆ. ತಾಲೂಕಿನ ಅಂಗನವಾಡಿ ಕೇಂದ್ರಗಳಲ್ಲಿ ಎಲ್‌ಕೆಜಿ, ಯುಕೆಜಿ ತರಗತಿಗಳು ಆರಂಭವಾಗಲಿವೆ.

ಪ್ರಿಯಾ ಅಗ್ನೇಶ್ ಪುತ್ತೂರು ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net