

ಕಡಬ: ಶ್ರೀರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜು ಹಾಗೂ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ರಕ್ಷಕ-ಶಿಕ್ಷಕ ಸಂಘದ ಆಶ್ರಯದಲ್ಲಿ ವಿಶ್ವೇಶ ಸೇವಾ ಸಮಿತಿ ವಾರ್ಷಿಕ ಶಿಬಿರದ ಅಂಗವಾಗಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಎರಡು ದಿನದ ನಾಟಕ ತರಬೇತಿಯ ಉದ್ಘಾಟನಾ ಕಾರ್ಯಕ್ರಮ ನಡೆಯಿತು.
ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಉಮೇಶ್ ಕೆ.ಎಂ. ತರಬೇತಿ ಉದ್ಘಾಟಿಸಿದರು. ನಾಟಕ ತರಬೇತುದಾರೆ, ನೀನಾಸಂ ಪದವೀಧರೆ ಭವಾನಿ ಉಪಸ್ಥಿತರಿದ್ದರು. ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಚಂದ್ರಶೇಖರ್ ಕೆ ಸ್ವಾಗತಿಸಿದರು. ರಕ್ಷಕ-ಶಿಕ್ಷಕ ಸಂಘದ ಕಾರ್ಯದರ್ಶಿ, ಶಿಕ್ಷಕ ವೆಂಕಟೇಶ ದಾಮ್ಲೆ ಪ್ರಸ್ತಾವಿಸಿದರು. ಸಂಸ್ಕೃತ ಉಪನ್ಯಾಸಕ ರವಿ ವಂದಿಸಿದರು. ಶಿಕ್ಷಕಿ ಉಷಾ ಕಾರ್ಯಕ್ರಮ ನಿರೂಪಿಸಿದರು.