

ಮಂಡ್ಯ: ಮಳವಳ್ಳಿ ತಾಲೂಕು ತೊರೆಕಾಡನಹಳ್ಳಿ(ಟಿ.ಕೆ. ಹಳ್ಳಿ)ಯಲ್ಲಿ ಅ.16ರಂದು ಬೆಳಗ್ಗೆ 10.30ಕ್ಕೆ ಕಾವೇರಿ ಐದನೇ ಹಂತ ಕುಡಿಯುವ ನೀರಿನ ಯೋಜನೆ ಲೋಕಾರ್ಪಣೆ ಸಮಾರಂಭ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಆವರಣದಲ್ಲಿ ಆಯೋಜಿಸಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಯೋಜನೆ ಲೋಕಾರ್ಪಣೆ ಮಾಡಲಿದ್ದಾರೆ. ವಿಶೇಷ ಆಹ್ವಾನಿತರಾಗಿ ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್, ಎಚ್.ಡಿ.ಕುಮಾರಸ್ವಾಮಿ, ಶೋಭಾ ಕರಂದ್ಲಾಜೆ, ವಿ.ಸೋಮಣ್ಣ ಭಾಗವಹಿಸಲಿದ್ದಾರೆ. ಮಳವಳ್ಳಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅಧ್ಯಕ್ಷತೆ ವಹಿಸಲಿದ್ದಾರೆಂದು ಪ್ರಕಟಣೆ ತಿಳಿಸಿದೆ.