ಫಲ-ಪುಷ್ಪ ಪ್ರದರ್ಶನ ಉದ್ಘಾಟನೆ

Inauguration of Fruit and Flower Show
Published on

ಮಡಿಕೇರಿ:

ಜಿಲ್ಲೆಯ ಪ್ರಮುಖ ಪ್ರವಾಸಿತಾಣಗಳಲ್ಲಿ ಒಂದಾಗಿರುವ ರಾಜಾಸೀಟ್ ಅನ್ನು ಮತ್ತಷ್ಟು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್. ಬೋಸರಾಜು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ವತಿಯಿಂದ ನಗರದ ರಾಜಾಸೀಟ್ ಉದ್ಯಾನವನದಲ್ಲಿ ಏರ್ಪಡಿಸಲಾಗಿರುವ ಫಲಪುಷ್ಪ ಪ್ರದರ್ಶನಕ್ಕೆ ಶುಕ್ರವಾರ ಚಾಲನೆ ನೀಡಿ ಮಾತನಾಡಿದರು.

ಫಲಪುಷ್ಪ ಪ್ರದರ್ಶನ ವಿಭಿನ್ನ ಮತ್ತು ವಿಶಿಷ್ಟವಾಗಿದ್ದು, ನೋಡುಗರನ್ನು ಗಮನ ಸೆಳೆಯುತ್ತಿದೆ. ರಾಜಾಸೀಟ್ ಉದ್ಯಾನವನದಲ್ಲಿ ನಿರ್ಮಾಣವಾಗಿರುವ ಇಗ್ಗುತಪ್ಪ ದೇವಾಲಯದ ಮಾದರಿ ಸೇರಿದಂತೆ ಹಲವು ಫಲಪುಷ್ಪ ಪ್ರದರ್ಶನಗಳು ಆಕರ್ಷಣೀಯವಾಗಿದ್ದು, ನೋಡುಗರನ್ನು ಸೆಳೆಯುತ್ತಿವೆ. ಈ ಪ್ರದರ್ಶನ ಕೇವಲ ಮೂರು ದಿನ ಮಾತ್ರವಲ್ಲದೆ ಎಂಟು ದಿನಗಳ ಕಾಲ ನಡೆಯುವಂತಾಗಬೇಕು ಎಂದರು.

ಜಿಲ್ಲೆಯ ಅಭಿವೃದ್ಧಿಗೆ ಸಂಬAಧಿಸಿದAತೆ ಶಾಸಕರ ಜತೆಗೂಡಿ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ ಮಾಹಿತಿ ಸಲ್ಲಿಸಲಾಗುವುದು. ಕೊಡಗು ಜಿಲ್ಲೆಯ ಅಭಿವೃದ್ಧಿ ಸಂಬAಧಿಸಿದAತೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಇದೇ ವೇಳೆ ತಿಳಿಸಿದರು.

ಮಡಿಕೇರಿ ಶಾಸಕ ಡಾ. ಮಂತರ್ ಗೌಡ ಮಾತನಾಡಿ ಬಣ್ಣ ಬಣ್ಣದ ಚಿತ್ತಾರದ ಹೂವುಗಳು ನೋಡುಗರನ್ನು ಚಕಿತಗೊಳಿಸುತ್ತಿದೆ. ರಾಜಾಸೀಟ್ ಉದ್ಯಾನವನದಲ್ಲಿ ಹಬ್ಬಗಳು ಸೇರಿದಂತೆ ವಿಶೇಷ ಸಂದರ್ಭಗಳಲ್ಲಿ ನಿರಂತರವಾಗಿ ಪುಷ್ಪ ಪ್ರದರ್ಶನಗಳು ನಡೆಯಬೇಕು ಎಂದರು.

ನಗರಸಭೆ ಅಧ್ಯಕ್ಷೆ ಅನಿತಾ ಪೂವಯ್ಯ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ವರ್ಣಿತ್ ನೇಗಿ, ಹಾಪ್ ಕಾಮ್ಸ್ ಅಧ್ಯಕ್ಷ ಬಿದ್ದಾಟಂಡ ರಮೇಶ್ ಚಂಗಪ್ಪ, ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷÀ ಮಾಚೇಟ್ಟಿರ ಚೋಟು ಕಾವೇರಪ್ಪ, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕÀ ಎಚ್.ಆರ್. ಯೋಗೇಶ್, ಹಿರಿಯ ಸಹಾಯಕ ನಿರ್ದೇಶಕÀ ಮುತ್ತಪ್ಪ ಮತ್ತು ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net