

ವಿಜಯವಾಣಿ ಸುದ್ದಿಜಾಲ ಬೆಳ್ತಂಗಡಿ
ವಿಧಾನಸಭಾ ಚುನಾವಣಾ ಪೂರ್ವದಲ್ಲಿ ನೀಡಿದ ಭರವಸೆಯಂತೆ ಪಂಚ ಗ್ಯಾರಂಟಿಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿ.ಕೆ ಶಿವ ಕುಮಾರ್ ಯಶಸ್ವಿಯಾಗಿದ್ದಾರೆ ಎಂದು ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಭರತ್ ಮುಂಡೋಡಿ ಹೇಳಿದರು.
ಬೆಳ್ತಂಗಡಿ ತಾಲೂಕು ಆಡಳಿತ ಕಚೇರಿಯಲ್ಲಿ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದರು.
ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಮಾತನಾಡಿ, ಶರವೇಗದಲ್ಲಿ ಪಂಚ ಗ್ಯಾರಂಟಿಗಳನ್ನು ಜನರಿಗೆ ತಲುಪಿಸುವಲ್ಲಿ ಕಾಂಗ್ರೆಸ್ ಸರ್ಕಾರ ಯಶಸ್ವಿಯಾಗಿದೆ. ಈ ಯೋಜನೆಯಿಂದ ಕೋಟ್ಯಂತರ ಕುಟುಂಬಗಳು ನೆಮ್ಮದಿಯ ಜೀವನ ನಡೆಸುತ್ತಿವೆ ಎಂದರು.
ಬೆಳ್ತಂಗಡಿ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಪದ್ಮನಾಭ ಸಾಲಿಯಾನ್ ಮಾತನಾಡಿದರು.
ಉಭಯ ಬ್ಲಾಕ್ ಕಾಂಗ್ರೆಸ್ ಘಟಕದ ಅಧ್ಯಕ್ಷರಾದ ಸತೀಶ್ ಕಾಶಿಪಟ್ನ, ನಾಗೇಶ್ ಕುಮಾರ್ ಗೌಡ, ಜಿ.ಪಂ ಮಾಜಿ ಸದಸ್ಯರಾದ ಸಾಹುಲ್ ಹಮೀದ್, ನಮಿತಾ ಕೆ.ಪೂಜಾರಿ, ಶೇಖರ್ ಕುಕ್ಕೇಡಿ, ಧರಣೇಂದ್ರ ಕುಮಾರ್, ಸೇವಾದಳದ ಜಿಲ್ಲಾಧ್ಯಕ್ಷ ಜೋಕಿಂ ಡಿಸೋಜಾ, ಜಿಲ್ಲಾ ಕೆಡಿಪಿ ಸದಸ್ಯ ಸಂತೋಷ್ ಕುಮಾರ್, ಅಪರ ಸರ್ಕಾರಿ ವಕೀಲ ಮನೋಹರ್ ಕುಮಾರ್, ತಾ.ಪಂ.ಮಾಜಿ ಸದಸ್ಯರಾದ ಈಶ್ವರ ಭಟ್, ವಿನ್ಸೆಂಟ್ ಡಿಸೋಜಾ, ಪ್ರವೀಣ್ ಫನಾರ್ಂಡಿಸ್ ಉಜಿರೆ, ಗೋಪಿನಾಥ ನಾಯಕ್, ಜಯವಿಕ್ರಮ್, ಜಗದೀಶ್ ಡಿ., ಎಸ್.ಸಿ.ಘಟಕದ ಅಧ್ಯಕ್ಷ ಓಬಯ್ಯ ಆರಂಬೋಡಿ, ಅಕ್ರಮ ಸಕ್ರಮ ಸಮಿತಿ ಸದಸ್ಯರಾದ ವಿನುತಾ ರಜತ್ ಗೌಡ ಮತ್ತಿತರರು ಉಪಸ್ಥಿತರಿದ್ದರು.