ಹನುಮ ದೇವಾಲಯ ಉದ್ಘಾಟನೆ

ಹನುಮ ದೇವಾಲಯ ಉದ್ಘಾಟನೆ
Published on

ಮದ್ದೂರು: ತಾಲೂಕಿನ ಬೆಸಗರಹಳ್ಳಿ ಗ್ರಾಮದಲ್ಲಿ ಪುರಾಣ ಪ್ರಸಿದ್ಧ ಶ್ರೀ ಹನುಮಂತ ದೇವರ ದೇವಾಲಯ ಜೀರ್ಣೋದ್ಧಾರಗೊಂಡು ಉದ್ಘಾಟನೆ ಹಿನ್ನೆಲೆಯಲ್ಲಿ ವಿಶೇಷ ಪೂಜಾ ಕೈಂಕರ್ಯ ನೆರವೇರಿದವು.

ದೇವಾಲಯದ ಆವರಣದಲ್ಲಿ ಭಾನುವಾರ ಹೋಮ, ಹವನಗಳು, ಭಜನೆ ವಿವಿಧ ಧಾರ್ಮಿಕ ಕಾರ್ಯಗಳು ನಡೆದವು.

ದೇಗುಲ, ಗ್ರಾಮದ ಪ್ರಮುಖ ಬೀದಿಗಳನ್ನು ದೀಪಲಂಕಾರಗೊಳಿಸಲಾಗಿತ್ತು. ಗ್ರಾಮ ಹಾಗೂ ಸುತ್ತಮುತ್ತಲಿನ ಜನತೆ ದೇವಾಲಯಕ್ಕೆ ತೆರಳಿ ಪೂಜಾ ಕೈಂಕರ್ಯದಲ್ಲಿ ಪಾಲ್ಗೊಂಡರು. ಹನುಮಂತ ದೇವರಿಗೆ ಮಹಾ ಮಂಗಳಾರತಿ, ಪ್ರಸಾದ ವಿನಿಯೋಗವಾದ ನಂತರ ಅನ್ನ ಸಂತರ್ಪಣೆ ಏರ್ಪಡಿಸಲಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net