20ರಂದು ಇಂದಬೆಟ್ಟು ಶಾಖೆ ಉದ್ಘಾಟನೆ : ಶ್ರೀ ಕಾಲಭೈರವ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ

Published on

ಬೆಳ್ತಂಗಡಿ: ಉಜಿರೆ ಶ್ರೀ ಕಾಲಭೈರವ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಇಂದಬೆಟ್ಟು ಶಾಖೆಯ ಉದ್ಘಾಟನೆ ಜ.20 ರಂದು ಬೆಳಗ್ಗೆ 10.30ಕ್ಕೆ ನಡೆಯಲಿದೆ. ಕಾವೂರಿನ ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾಮಠದ ಡಾ.ಧರ್ಮಪಾಲನಾಥ ಸ್ವಾಮೀಜಿ ಉದ್ಘಾಟಿಸಲಿದ್ದಾರೆ. ಮಾಜಿ ಸಚಿವ ಹಾಗೂ ಪ್ರಸನ್ನ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಕೆ.ಗಂಗಾಧರ ಗೌಡ ಗಣಕಯಂತ್ರ ವಿಭಾಗ ಉದ್ಘಾಟಿಸುವರು. ಭದ್ರತಾ ಕೊಠಡಿಯನ್ನು ಮಾಜಿ ಶಾಸಕ ಸಂಜೀವ ಮಠಂದೂರು ಉದ್ಘಾಟಿಸಲಿದ್ದಾರೆ. ಸೊಸೈಟಿ ಅಧ್ಯಕ್ಷ ರಂಜನ್ ಜಿ.ಗೌಡ ಅಧ್ಯಕ್ಷತೆ ವಹಿಸಲಿದ್ದಾರೆ.

ಉಜಿರೆ ತಾಲೂಕು ಒಕ್ಕಲಿಗ ಗೌಡರ ಸಂಘದ ಅಧ್ಯಕ್ಷ ಬಾಲಕೃಷ್ಣ ಗೌಡ ಕೇರಿಮಾರು, ಜಿಲ್ಲಾ ಒಕ್ಕಲಿಗ ಗೌಡರ ಸೇವಾ ಸಂಘದ ಅಧ್ಯಕ್ಷ ಡಿ.ಬಿ. ಬಾಲಕೃಷ್ಣ ಗೌಡ, ಉಪಾಧ್ಯಕ್ಷ ಭಾಸ್ಕರ ದೇವಸ್ಯ, ಪುತ್ತೂರು ಮಹಿಳಾ ವಿವಿಧೋದ್ದೇಶ ಸಹಕಾರಿ ಸಂಘ ಅಧ್ಯಕ್ಷೆ ಗೌರಿ ಬನ್ನೂರು, ಜಿಲ್ಲಾ ಒಕ್ಕಲಿಗ ಗೌಡರ ಸೇವಾ ಸಂಘದ ನಿರ್ದೇಶಕ ವಿಜಯ ಗೌಡ ವೇಣೂರು, ಜಿಲ್ಲಾ ಒಕ್ಕಲಿಗ ಗೌಡರ ಸೇವಾ ಸಂಘದ ಜಂಟಿ ಕೋಶಾಧಿಕಾರಿ ಸೂರಜ್ ಗೌಡ ವಳಂಬ್ರ, ಜತೆ ಕಾರ್ಯದರ್ಶಿ ದಾಮೋದರ ಗೌಡ ಸುರುಳಿ, ನಿರ್ದೇಶಕಿ ಸೌಮ್ಯಲತಾ ಜಯಂತ ಗೌಡ, ತಾಲೂಕು ಒಕ್ಕಲಿಗ ಗೌಡರ ಟ್ರಸ್ಟ್ ಅಧ್ಯಕ್ಷ ಮೋಹನ ಗೌಡ ಕಲ್ಮಂಜ, ಕಾರ್ಯಾಧ್ಯಕ್ಷ ಶ್ರೀನಿವಾಸಗೌಡ ಬೆಳಾಲು, ಇಂದಬೆಟ್ಟು ಗ್ರಾಪಂ ಅಧ್ಯಕ್ಷೆ ಆಶಾಲತಾ ಗುಡಿಗಾರ್, ಬಂಗಾಡಿ ಸಿಎ ಬ್ಯಾಂಕ್ ಅಧ್ಯಕ್ಷ ಹರೀಶ್ ಸಾಲಿಯಾನ್, ಉಪಾಧ್ಯಕ್ಷ ಆನಂದ ಗೌಡ, ಹಿರಿಯ ಅಧಿಕಾರಿ ಗುರುಪ್ರಸಾದ್ ಬಂಗೇರ, ಸೌಹಾರ್ದ ಅಭಿವೃದ್ಧಿ ಅಧಿಕಾರಿ ವಿಜಯ ಬಿ.ಎಸ್.ಭಾಗವಹಿಸಲಿದ್ದಾರೆ ಎಂದು ಸೊಸೈಟಿಯ ಸಿಇಒ ದಿನೇಶ್ ಗೌಡ ಕಲ್ಲಾಜೆ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net