ಇಂದಬೆಟ್ಟು ಶಾಲೆ ಕೊಠಡಿ ಉದ್ಘಾಟನೆ

New Project
Published on

ವಿಜಯವಾಣಿ ಸುದ್ದಿಜಾಲ ಬೆಳ್ತಂಗಡಿ

ಬೆಳ್ತಂಗಡಿ ಲಯನ್ಸ್ ಕ್ಲಬ್ ಆಶ್ರಯದಲ್ಲಿ ಇಂದಬೆಟ್ಟು ಶಾಲೆ ಕೊಠಡಿ ಉದ್ಘಾಟನಾ ಸಮಾರಂಭ ನಡೆಯಿತು. ಶಾಸಕ ಹರೀಶ್ ಪೂಂಜ ಕೊಠಡಿ ಉದ್ಘಾಟಿಸಿದರು.

ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್, ಬದುಕು ಕಟ್ಟೋಣ ತಂಡ ಸಂಚಾಲಕ ಮೋಹನ್ ಕುಮಾರ್ ಮಾತನಾಡಿದರು. ಲಯನ್ ದೇವದಾಸ್ ಶೆಟ್ಟಿ, ಚಿತ್ರ ಕಲಾವಿದ ಧನುಷ್ ಅವರನ್ನು ಸನ್ಮಾನಿಸಲಾಯಿತು. ಲಯನ್ ಕಿರಣ್ ಕುಮಾರ್ ಶೆಟ್ಟಿ, ಗ್ರಾಪಂ ಅಧ್ಯಕ್ಷೆ ಆಶಾಲತಾ, ಗುಡಿಗಾರ್ ಗ್ರಾಪಂ ಸದಸ್ಯ ಆನಂದ ಅಡಿಲು, ಎಸ್‌ಡಿಎಂಸಿ ಅಧ್ಯಕ್ಷ ಆನಂದ ಕೊಪ್ಪದ ಕೋಡಿ, ಲಯನ್ ಅಶೋಕ್ ಬಿ.ಪಿ. ಉಪಸ್ಥಿತರಿದ್ದರು.

ಲಯನ್ಸ್ ಅಧ್ಯಕ್ಷ ದೇವದಾಸ್ ಶೆಟ್ಟಿ ಸ್ವಾಗತಿಸಿದರು. ಮುಖ್ಯಶಿಕ್ಷಕಿ ದೀಪಾ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕಿ ಸುಜಾತಾ ವಂದಿಸಿದರು. ಪ್ರಾಥಮಿಕ ಪದವೀಧರ ಶಿಕ್ಷಕಿ ಮೇಘ ಎಂ.ಕೆ. ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net