ನಿಟ್ಟೆ ವಿವಿಯಲ್ಲಿ ಅಂತರ್ ಕಾಲೇಜು ಕ್ರೀಡಾಕೂಟ ಉದ್ಘಾಟನೆ

mng- nov 10- nitte vv
ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯ ಮಟ್ಟದ ಪುರುಷರ ಹಾಗೂ ಮಹಿಳೆಯರ ಅಂತರ್ ಕಾಲೇಜು ಸ್ಫರ್ಧಾ ಕಾರ್ಯಕ್ರಮವನ್ನು ನಿಟ್ಟೆ ತಾಂತ್ರಿಕ ಕಾಲೇಜಿನ ಹಳೆಯ ವಿದ್ಯಾರ್ಥಿ ವೈಭವ್ ವಿ. ಪ್ರಭು ಉದ್ಘಾಟಿಸಿ ಮಾತನಾಡಿದರು.
Published on

ಮಂಗಳೂರು: ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯ ಮಟ್ಟದ ಪುರುಷರ ಹಾಗೂ ಮಹಿಳೆಯರ ಅಂತರ್ ಕಾಲೇಜು ವೈಟ್‌ಲಿಫ್ಟಿಂಗ್, ಪವರ್ ಲಿಫ್ಟಿಂಗ್ ಮತ್ತು ಬೆಸ್ಟ್ ಫಿಸಿಕ್ (ಪುರುಷರ ವಿಭಾಗ) ಸ್ಪರ್ಧೆ ಮತ್ತು ಆಯ್ಕೆ ಪ್ರಕ್ರಿಯೆಯನ್ನು ನಿಟ್ಟೆಯ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯವು ನಿಟ್ಟೆಯ ಬಿಸಿ ಆಳ್ವ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ನಿಟ್ಟೆ ತಾಂತ್ರಿಕ ಕಾಲೇಜಿನ ಪ್ರಾಂಶುಪಾಲ ಡಾ. ನಿರಂಜನ್ ಎನ್ ಚಿಪ್ಲುಂಕರ ಮಾತನಾಡಿ, ಕ್ರೀಡಾಕೂಟವು ಗುರಿಯನ್ನು ನಿಶ್ಚಯ ಮಾಡುವ ಪಾಠ. ಕ್ರೀಡೆಯು ಆತ್ಮವಿಶ್ವಾಸ ಮತ್ತು ದೈಹಿಕ ಕ್ಷಮತೆಯನ್ನು ಹೆಚ್ಚಿಸಲು ಸಹಕಾರಿ ಆಗಿದ್ದು, ದೈಹಿಕ ಮತ್ತು ಮಾನಸಿಕ ಅಭಿವೃದ್ಧಿಯ ಮೂಲವಾಗಿದೆ. ಕ್ರೀಡೆಯಿಂದ ಧೈರ್ಯ ಮತ್ತು ಸಾಹಸ ಗುಣಗಳನ್ನು ವೃದ್ಧಿಸುವುದು ಮಾತ್ರವಲ್ಲದೆ ವ್ಯಕ್ತಿತ್ವ ವಿಕಸನಕ್ಕೆ ಕ್ರೀಡೆಯು ಪ್ರಮುಖ ಕಾರಣ. ಸಮಗ್ರ ಶಿಕ್ಷಣದಲ್ಲಿ ಕ್ರೀಡೆಯ ಮಹತ್ವ ಹೆಚ್ಚಿದೆ. ವಿದ್ಯಾರ್ಥಿಗಳಲ್ಲಿ ಕ್ರೀಡಾ ಮನೋಭಾವವನ್ನು ಬೆಳೆಸುವಲ್ಲಿ ವಿದ್ಯಾಸಂಸ್ಥೆಯ ಆಡಳಿತ ಮಂಡಳಿಯ ಪ್ರಯತ್ನ ಶ್ಲಾಘನೀಯ ಎಂದರು.

ನಿಟ್ಟೆ ತಾಂತ್ರಿಕ ಕಾಲೇಜಿನ ಹಳೆಯ ವಿದ್ಯಾರ್ಥಿ ವೈಭವ್ ವಿ. ಪ್ರಭು ಕಾರ್ಯಕ್ರಮ ಉದ್ಘಾಟಿಸಿದರು.

ಕಾಮನ್ವೆಲ್ತ್ ಚಿನ್ನದ ಪದಕ ವಿಜೇತ ವೈಟ್ ಲಿಫ್ಟರ್ ಮತ್ತು ಕೆನರಾ ಬ್ಯಾಂಕಿನ ನಿವೃತ್ತ ಹಿರಿಯ ಮ್ಯಾನೇಜರ್ ಪುಷ್ಪರಾಜ ಹೆಗ್ಡೆ, ದೈಹಿಕ ಶಿಕ್ಷಣ ನಿರ್ದೇಶಕಿ ಸೌಜನ್ಯ ಹಾಗೂ ನಿಟ್ಟೆ ಪಾಲಿಟೆಕ್ನಿಕ್ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಗಂಗಾಧರ್ ಪೂಜಾರಿ ಉಪಸ್ಥಿತರಿದ್ದರು.

ನಿಟ್ಟೆ ತಾಂತ್ರಿಕ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಡಾ.ಗಣೇಶ್ ಪೂಜಾರಿ ಸ್ವಾಗತಿಸಿದರು. ವಿದ್ಯಾರ್ಥಿನಿ ಅನ್ವಿತಾ ಅತಿಥಿಗಳನ್ನ ಪರಿಚಯಿಸಿದರು. ನಿಟ್ಟೆ ಕ್ಯಾಂಪಸ್ ನ ಕ್ರೀಡಾ ಆಡಳಿತಾಧಿಕಾರಿ ಶ್ಯಾಮಸುಂದರ್ ಎಂ ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net