ವಿಶ್ವದಲ್ಲಿ ಮೊದಲ ಪ್ರಜಾಪ್ರಭುತ್ವ ಪ್ರತಿಪಾದಿಸಿದ ನೆಲ ಕಲ್ಯಾಣ

16 bk-2
ಬಸವಕಲ್ಯಾಣದ ಶ್ರೀ ಬಸವೇಶ್ವರ ಪದವಿ ಕಾಲೇಜಿನಲ್ಲಿ ಐಕ್ಯುಎಸಿ ವತಿಯಿಂದ ಭಾನುವಾರ ಹಮ್ಮಿಕೊಂಡಿದ್ದ ಅಂತಾರಾಷ್ಟಿçÃಯ ಪ್ರಜಾಪ್ರಭುತ್ವ ದಿನಾಚರಣೆಯಲ್ಲಿ ಡಾ.ಮಲ್ಲಿಕಾರ್ಜುನ ಲಕಶಟ್ಟಿ, ಪ್ರೊ.ಸಂಗೀತಾ ಮಹಾಗಾಂವೆ, ಡಾ.ಭೀಮಾಶಂಕರ ಬಿರಾದಾರ, ಡಾ.ಶಾಂತಲಾ ಪಾಟೀಲ್, ಗಂಗಾಧರ ಸಾಲಿಮಠ, ಅನುಪಮಾ, ಅಂಜಲಿ ದುಬೆ ಇತರರಿದ್ದರು.
Published on

ಬಸವಕಲ್ಯಾಣ: ವಿಶ್ವದಲ್ಲಿ ಮೊದಲು ಪ್ರಜಾಪ್ರಭುತ್ವ ಪ್ರತಿಪಾದಿಸಿದ ಸ್ಥಳ ಬಸವಕಲ್ಯಾಣ ಎಂದು ಶ್ರೀ ಬಸವೇಶ್ವರ ದೇವಸ್ಥಾನ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಡಾ.ಮಲ್ಲಿಕಾರ್ಜುನ ಲಕಶಟ್ಟಿ ಹೇಳಿದರು.

ಶ್ರೀ ಬಸವೇಶ್ವರ ಪದವಿ ಕಾಲೇಜಿನಲ್ಲಿ ಐಕ್ಯುಎಸಿ ವತಿಯಿಂದ ಭಾನುವಾರ ಆಯೋಜಿಸಿದ್ದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಭಾರತವನ್ನು ಸಮಾಜವಾದಿ ಮತ್ತು ಜಾತ್ಯತೀತವಾಗಿ ರೂಪಿಸಲು ಸಂವಿಧಾನ ಮತ್ತು ಪ್ರಜಾಪ್ರಭುತ್ವ ಆಧಾರ ಸ್ತಂಭವಾಗಿವೆ. ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಅನುಭವ ಮಂಟಪದಿಂದಲೇ ಮಾನವ ಸರಪಳಿ ಆರಂಭಿಸುವ ಯೋಜನೆ ಸರ್ಕಾರ ಹಮ್ಮಿಕೊಳ್ಳಲಾಗಿತ್ತು ಎಂದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಡಾ.ಭೀಮಾಶಂಕರ ಬಿರಾದಾರ ಮಾತನಾಡಿ, ವಚನ ಸಾಹಿತ್ಯ ಮತ್ತು ಭಾರತೀಯ ಸಂವಿಧಾನದಲ್ಲಿ ಅತೀ ಹೆಚ್ಚು ಸಾಮ್ಯತೆಗಳಿವೆ. ಕರ್ನಾಟಕ ಸಾಂಸ್ಕೃತಿಕ ನಾಯಕ ಬಸವಣ್ಣ ಹಾಗೂ ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರ್ ಸಮಾನತೆಯ ಕನಸುಗಾರರು. ಪ್ರಜಾಪ್ರಭುತ್ವದ ಅಸ್ತಿತ್ವವನ್ನು ಈ ನೆಲದಲ್ಲಿ ನೆಲೆ ನಿಲ್ಲಿಸಲು ಶ್ರಮಿಸಿದವರು ಎಂದು ಬಣ್ಣಿಸಿದರು.

ಪ್ರೊ.ಸಂಗೀತಾ ಮಹಾಗಾಂವೆ ವಿಶೇಷ ಉಪನ್ಯಾಸ ನೀಡಿದರು. ಶ್ರೀ ಬಸವೇಶ್ವರ ಪಿಜಿ ಕಾಲೇಜು ಪ್ರಾಚಾರ್ಯೆ ಡಾ.ಶಾಂತಲಾ ಪಾಟೀಲ್, ಗಂಗಾಧರ ಸಾಲಿಮಠ, ಅನುಪಮಾ, ಅಂಜಲಿ ದುಬೆ ಮಾತನಾಡಿದರು.

ಗುರುದೇವಿ ಕಿಚಡೆ, ವಿವೇಕಾನಂದ ಶಿಂಧೆ, ಶ್ರೀನಿವಾಸ ಉಮಾಪುರೆ, ಬಸವರಾಜ ಗುಂಗೆ, ಸುಧೀರ ಯಾದವ, ನೀಲಮ್ಮ ಮೇತ್ರಿ, ರೋಷನ್ ಬೀ, ಪವನ ಪಾಟೀಲ್, ಪ್ರಶಾಂತ ಬುಡಗೆ, ಗಣಪತರಾವ ಮೇತ್ರೆ ಇತರರಿದ್ದರು. ಸಂವಿಧಾನ ಪೀಠಿಕೆ ಓದುವ ಮೂಲಕ ಸಮಾರಂಭ ಆರಂಭಿಸಲಾಯಿತು. ಜಗದೇವಿ ಜವಳಿಗೆ ಸ್ವಾಗತಿಸಿದರು. ಡಾ.ಬಸವರಾಜ ಖಂಡಾಳೆ ನಿರೂಪಣೆ ಮಾಡಿದರು. ಚನ್ನಬಸಪ್ಪ ಗೌರ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net