

ಕಡಬ: ಪುಣ್ಚಪ್ಪಾಡಿ ಗ್ರಾಮದ ಕುಮಾರಮಂಗಲ ಹಿ.ಪ್ರಾ.ಶಾಲೆ ಮತ್ತು ಹಳೇ ವಿದ್ಯಾರ್ಥಿ ಸಂಘದ ಆಶ್ರಯದಲ್ಲಿ ೩ ದಿನದ ಬೇಸಿಗೆ ಶಿಬಿರ ಮತ್ತು ಹಳೇ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭ ಇತ್ತೀಚೆಗೆ ನಡೆಯಿತು.
ಹಳೇ ವಿದ್ಯಾರ್ಥಿ ಸಂಘದ ಗೌರವ ಸಲಹೆಗಾರ ಬಾಳಪ್ಪ ಪೂಜಾರಿ ಉದ್ಘಾಟಿಸಿದರು. ಹಳೇ ವಿದ್ಯಾರ್ಥಿ ಸಂಘ ಅಧ್ಯಕ್ಷ, ವಕೀಲ ಮಹೇಶ್ ಕೆ.ಸವಣೂರು ಅಧ್ಯಕ್ಷತೆ ವಹಿಸಿದ್ದರು.
ಸವಣೂರು ಗ್ರಾಪಂ ಸದಸ್ಯ ಗಿರಿಶಂಕರ ಸುಲಾಯ ದೇವಸ್ಯ, ಎಸ್ಡಿಎಂಸಿ ಮಾಜಿ ಅಧ್ಯಕ್ಷ ಕೃಷ್ಣಯ್ಯ ನೆಕ್ರಾಜೆ, ಸವಣೂರು ಗ್ರಾಪಂ ಅಧ್ಯಕ್ಷೆ ಸುಂದರಿ ಬಿ.ಎಸ್., ಉಪಾಧ್ಯಕ್ಷೆ ಜಯಶ್ರೀ ಕುಚ್ಚೆಜಾಲು, ಸದಸ್ಯೆ ಯಶೋದಾ ನೂಜಾಜೆ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಡಬ ತಾಲೂಕು ಯೋಜನಾಧಿಕಾರಿ ಮೇದಪ್ಪ ಗೌಡ, ಸವಣೂರು ಸಹಕಾರ ಸಂಘ ಉಪಾಧ್ಯಕ್ಷ ಚೇತನ್ ಕುಮಾರ್ ಕೋಡಿಬೈಲು, ಹಳೇ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ರಾಮಕೃಷ್ಣ ಕನ್ಯಾಮಂಗಲ, ಎಸ್ಡಿಎಂಸಿ ಅಧ್ಯಕ್ಷ ಸುಂದರ ಕನ್ಯಾಮಂಗಲ, ಉಪಾಧ್ಯಕ್ಷೆ ಹೇಮಲತಾ, ಸವಣೂರು ಹಾ.ಉ.ಸಹಕಾರ ಸಂಘದ ಉಪಾಧ್ಯಕ್ಷೆ ಆಶಾ ರೈ ಕಲಾಯಿ, ಕಡಬ ತಾಪಂ ಮಾಜಿ ಅಧ್ಯಕ್ಷೆ ರಾಜೇಶ್ವರಿ ಕನ್ಯಾಮಂಗಲ, ಹಳೇ ವಿದ್ಯಾರ್ಥಿ ಸಂಘದ ಜತೆ ಕಾಯರ್ರ್ದರ್ಶಿ ಉಮೇಶ್ ಬೇರಿಕೆ ಉಪಸ್ಥಿತರಿದ್ದರು.
ಮುಖ್ಯಶಿಕ್ಷಕಿ ಕವಿತಾ ಸ್ವಾಗತಿಸಿ, ಹಳೇ ವಿದ್ಯಾರ್ಥಿ ಸಂಘ ಕೋಶಾಧಿಕಾರಿ ಪುಟ್ಟಣ್ಣ ಪರಣೆ ವಂದಿಸಿ, ಲಿಖಿತ್ ರೈ ಕಲಾಯಿ ಕಾರ್ಯಕ್ರಮ ನಿರೂಪಿಸಿದರು.