

ಬೈಂದೂರು: ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘದ ನವೀಕೃತ ಪ್ರಧಾನ ಕಚೇರಿ ಮತ್ತು ಮೇಲಂತಸ್ತಿನ ಕಟ್ಟಡದ ಉದ್ಘಾಟನೆ ನಾವುಂದದಲ್ಲಿ ಜೂನ್ 15ರಂದು ಬೆಳಗ್ಗೆ 10.30ಕ್ಕೆ ನಡೆಯಲಿದೆ.
ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ನವೀಕೃತ ಪ್ರದಾನ ಕಚೇರಿ ಉದ್ಘಾಟಿಸಲಿದ್ದಾರೆ. ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ಅಧ್ಯಕ್ಷತೆ ವಹಿಸುವರು. ಮಾಜಿ ಶಾಸಕರಾದ ಗೋಪಾಲ ಪೂಜಾರಿ, ಬಿ.ಎಂ.ಸುಕುಮಾರ ಶೆಟ್ಟಿ, ಉಡುಪಿಯ ಸಹಕಾರ ಸಂಘಗಳ ಉಪನಿಬಂಧಕಿ ಲಾವಣ್ಯ ಕೆ.ಆರ್., ಕುಂದಾಪುರ ಉಪವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕ ಅರುಣ್ ಕುಮಾರ್ ಎಸ್.ವಿ., ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಎಂ.ಮಹೇಶ ಹೆಗ್ಡೆ, ಪ್ರಾಥಮಿಕ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ ಅಧ್ಯಕ್ಷ ಮಲ್ಯಾಡಿ ಶಿವರಾಮ ಶೆಟ್ಟಿ, ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಇಂದ್ರಾಳಿ ಜಯಕರ ಶೆಟ್ಟಿ, ಕುಂದಾಪುರ ತಾಲೂಕು ಕೃಷಿ ಉತ್ಪನ್ನ ಮಾರಾಟ ಸಹಕಾರ ಸಂಘದ ಅಧ್ಯಕ್ಷ ಎಚ್.ಹರಿಪ್ರಸಾದ್ ಶೆಟ್ಟಿ, ನಾವುಂದ ಗ್ರಾಪಂ ಅಧ್ಯಕ್ಷ ನರಸಿಂಹ ದೇವಾಡಿಗ ಮತ್ತಿತರರು ಉಪಸ್ಥಿತರಿರುವರು.
ಮಧ್ಯಾಹ್ನ 2ಗಂಟೆಗೆ ಉಡುಪಿಯ ಯಕ್ಷ ರಾಘವ ಜನ್ಸಾಲೆ ಪ್ರತಿಷ್ಠಾನ ಅತಿಥಿ ಕಲಾವಿದರ ಕೂಡುವಿಕೆಯಿಂದ ನಾಗಶ್ರೀ ಯಕ್ಷಗಾನ ಪ್ರದರ್ಶನಗೊಳ್ಳಲಿದೆ ಎಂದು ಅಧ್ಯಕ್ಷ ಎಸ್.ರಾಜು ಪೂಜಾರಿ, ಉಪಾಧ್ಯಕ್ಷ ಎಂ.ಚಂದ್ರಶೀಲ ಶೆಟ್ಟಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುರೇಶ ಅಳ್ವೆಗದ್ದೆ ತಿಳಿಸಿದ್ದಾರೆ.