

ಮಂಗಳೂರು: ಎಂ.ಸಿ.ಸಿ ಬ್ಯಾಂಕ್ ಸುಸಜ್ಜಿತ ಆಡಳಿತ ಕಚೇರಿ ಮತ್ತು ಸಂಸ್ಥಾಪಕರ ಶಾಖೆ ಹಂಪನಕಟ್ಟ, ಅಶೋಕನಗರ, ಕಂಕನಾಡಿ, ಕುಲಶೇಕರ, ಮೋರ್ಗನ್ಸ್‌ಗೇಟ್, ಮೂಡಬಿದ್ರಿ, ಶಿರ್ವ, ಬಜಪೆ, ಕಿನ್ನಿಗೋಳಿ, ಸುರತ್ಕಲ್, ಉಳ್ಳಾಲ, ಉಡುಪಿ, ಕುಂದಾಪುರ, ಪುತ್ತೂರು, ಬಿ.ಸಿ.ರೋಡ್, ಕಾರ್ಕಳ, ಬ್ರಹ್ಮಾವರ ಮತ್ತು ಬೆಳ್ತಂಗಡಿ ಹೀಗೆ 18 ಶಾಖೆಗಳನ್ನು ಹೊಂದಿರುವ ಎಂ.ಸಿ.ಸಿ. ಬ್ಯಾಂಕ್ ತನ್ನ 19ನೇ ಶಾಖೆಯನ್ನು ಮಾ.2 ರಂದು ಬೆಳ್ಮಣ್‌ನಲ್ಲಿ ಉದ್ಘಾಟನೆಗೊಳ್ಳಲಿದೆ.
ಎಂಸಿಸಿ ಬ್ಯಾಂಕಿನ ಬೆಳ್ಮಣ್ ಶಾಖೆಯ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಅನಿಲ್ ಲೋಬೊ ವಹಿಸಲಿದ್ದಾರೆ. ಕರ್ನಾಟಕ ವಿಧಾನ ಪರಿಷತ್ ಶಾಸಕ ಐವನ್ ಡಿಸೋಜ ನೂತನ ಶಾಖೆ ಉದ್ಘಾಟಿಸಲಿದ್ದಾರೆ. ಸಂತ ಜೋಸೆಪ್ಸ್ ಚರ್ಚ್ ಬೆಳ್ಮಣ್ ಇದರ ಧರ್ಮಗುರು ಫ್ರೆಡ್ರಿಕ್ ಮಸ್ಕರೇನ್ಹಸ್ ಆಶಿರ್ವಚನ ನೀಡಲಿದ್ದಾರೆ. ದಾಯ್ಜಿವಲ್ಡ್ ಮೀಡಿಯಾ ಸಂಸ್ಥೆಯ ಸಂಸ್ಥಾಪಕ ವಾಲ್ಟರ್ ನಂದಳಿಕೆ ಮುಖ್ಯ ಅತಿಥಿಯಾಗಿದ್ದು, ಬೆಳ್ಮಣ್ ಗ್ರಾಪಂ ಅಧ್ಯಕ್ಷೆ ರಾಮೇಶ್ವರಿ ಎಂ. ಶೆಟ್ಟಿ ಉಪಸ್ಥಿತರಿರುವರು.
113 ವರ್ಷಗಳ ಇತಿಹಾಸವಿರುವ ಎಂಸಿಸಿ ಬ್ಯಾಂಕ್ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಅತ್ಯುತ್ತಮ ಪ್ರಗತಿ ಸಾಧಿಸುತ್ತಿದ್ದು 2023-24ನೇ ವಿತ್ತೀಯ ವರ್ಷದಲ್ಲಿ ಶೇಕಡಾ 10ಶೇ. ಲಾಭಾಂಶ ಘೋಷಿಸಿರುತ್ತದೆ. ಬ್ಯಾಂಕ್ ಸತತವಾಗಿ ಲಾಭ ಗಳಿಸುತ್ತಿದ್ದು. 2023-24ನೇ ವಿತ್ತೀಯ ವರ್ಷದಲ್ಲಿ ಲಾಭ ಗಳಿಕೆಯಲ್ಲಿ ಅಭೂತಪೂರ್ವ ಪ್ರಗತಿ ಸಾಧಿಸಿದ್ದು, ಬ್ಯಾಂಕಿನ ನಿವ್ವಳ ಲಾಭವು ರೂ.10.45 ಕೋಟಿಯಾಗಿರುತ್ತದೆ. ಇದು ಬ್ಯಾಂಕಿನ ಚರಿತ್ರೆಯಲ್ಲಿಯೇ ಅತ್ಯಂತ ಹೆಚ್ಚಿನ ಲಾಭವಾಗಿರುತ್ತದೆ. ಕಳೆದ 6 ವರ್ಷಗಳಿಂದ ಪ್ರಸ್ತುತ ಆಡಳಿತ ಮಂಡಳಿಯು ಸಹಕಾರ ರತ್ನ ಅನಿಲ್ ಲೋಬೊ ಇವರ ಮುಂದಾಳತ್ವದಲ್ಲಿ ಬ್ಯಾಂಕ್ ಪ್ರಗತ್ತಿಯತ್ತ ದಾಪುಗಾಲು ಇಡುತ್ತಿದೆ.
ಮಾ.3 ರಂದು ಬ್ರಹ್ಮಾವರ ಶಾಖೆಯ ಎಟಿಎಂ ಉದ್ಘಾಟನೆ: ವಾರಂಬಳ್ಳಿ ಆಕಾಶವಾಣಿ ವೃತ್ತದ ಬಳಿ ಶೇಷಗೋಪಿ ಪ್ಯಾರಡೈಸ್‌ನ ನೆಲಮಹಡಿಯಲ್ಲಿ ಎಂ.ಸಿ.ಸಿ ಬ್ಯಾಂಕ್ ಬ್ರಹ್ಮಾವರ ಶಾಖೆಯ ಎಟಿಎಂ ಉದ್ಘಾಟನೆ ಮಾ.3 ರಂದು ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ ಎಂದು ಎಂ.ಸಿ.ಸಿ ಬ್ಯಾಂಕ್ ಪ್ರಕಟಂಎಯಲ್ಲಿ ತಿಳಿಸಿದೆ.