ಸೆ.೧೮ರಂದು ನೂತನ ಸಭಾಭವನ ಉದ್ಘಾಟನೆ

WhatsApp Image 2022-09-16 at 12.10.20 PM
Published on

ಮಡಿಕೇರಿ: ಕಾರುಗುಂದದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿದ್ದ ಚೇರಂಬಾಣೆ ಗೌಡ ಸಮಾಜದ ಸಭಾ ಭವನ ಉದ್ಘಾಟನಾ ಸಮಾರಂಭ ಸೆ.೧೮ರಂದು ಹಮ್ಮಿಕೊಳ್ಳಲಾಗಿದೆ ಎಂದು ಸಮಾಜದ ಅಧ್ಯಕ್ಷ ಕೊಡಪಾಲು ಎಸ್.ಗಣಪತಿ ಹೇಳಿದರು.


ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಗ್ಗೆ ೧೦ ಗಂಟೆಗೆ ಆಯೋಜಿಸಿರುವ ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ವಿರಾಜಪೇಟೆ ಶಾಸಕ ಕೆ.ಜಿ.ಬೋಪಯ್ಯ, ಸಂಸದ ಪ್ರತಾಪ್ ಸಿಂಹ, ಎಂಎಲ್ಸಿ ಸುಜಾ ಕುಶಾಲಪ್ಪ, ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಲಕ್ಷ್ಮಿ ನಾರಾಯಣ ಕಜೆಗದ್ದೆ, ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ನಿರ್ದೇಶಕ ಎನ್.ಮಂಜುನಾಥ್, ಕೊಡಗು ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷ ಸೂರ್ತಲೆ ಸೋಮಣ್ಣ, ವೈಧ್ಯೆ ಡಾ.ಬೋಜಮ್ಮ ಜೋಯಪ್ಪ ಬೈತಡ್ಕ, ಉದ್ಯಮಿಗಳಾದ ಕೇಕಡ ನಂದ, ತೇನನ ರಾಜೇಶ್, ಆರ್ಕಿಟೆಕ್ಟ್ ಇಂಜಿನಿಯರ್ ಮುಕ್ಕಾಟಿ ಮನೋಜ್ ಕುಮಾರ್, ನಿವೃತ ಇಂಜಿನಿಯರ್ ಕೆದಂಬಾಡಿ ರಾಜು ಪಾಲ್ಗೊಳ್ಳಲಿದ್ದಾರೆ. ಅಧ್ಯಕ್ಷತೆಯನ್ನು ಸಮಾಜದ ಅಧ್ಯಕ್ಷ ಕೊಡಪಾಲು ಎಸ್.ಗಣಪತಿ ವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.


ಸುದ್ದಿಗೋಷ್ಠಿಯಲ್ಲಿ ಸಮಾಜದ ಉಪಾಧ್ಯಕ್ಷ ಕೇಕಡ ದಿನೇಶ್, ಕಾರ್ಯದರ್ಶಿ ಬೆಳ್ಯನ ಚಂದ್ರಪ್ರಕಾಶ್, ಖಜಾಂಚಿ ಬೈಮನ ಹರೀಶ್, ನಿರ್ದೇಶಕರಾದ ಕೆದಂಬಾಡಿ ರಾಜು, ಕೂಡಕಂಡಿ ಕಾವೇರಮ್ಮ ಸೋಮಣ್ಣ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net