ಪಿಡಿಒಗಳ ಕ್ಷೇಮಾಭಿವೃದ್ಧಿ ಸಂಘದ ನೂತನ ಶಾಖೆ ಉದ್ಘಾಟನೆ

19adarshkdga7
Published on

ಮಡಿಕೇರಿ: ಕರ್ನಾಟಕ ರಾಜ್ಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ನೂತನ ಜಿಲ್ಲಾ ಶಾಖಾ ಕಚೇರಿಯನ್ನು ಕೊಡಗು ಜಿ.ಪಂ.ಸಿಇಒ ಡಾ.ಎಸ್.ಆಕಾಶ್‌ರವರು ಉದ್ಘಾಟಿಸಿದರು.


ಕೊಡಗು ಜಿಲ್ಲಾ ಪಂಚಾಯಿತಿ ಭವನದಲ್ಲಿರುವ ನೂತನ ಭವನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪಿಡಿಒಗಳ ಅಭ್ಯುದಯ ಮತ್ತು ಸಾಮಾಜಿಕ ಕಳಕಳಿಯೊಂದಿಗೆ ಸಂಘ ಕಾರ್ಯ ನಿರ್ವಹಿಸುವಂತಾಗಲಿ ಎಂದರು.


ಕರ್ನಾಟಕ ರಾಜ್ಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾಧ್ಯಕ್ಷ ರವೀಶ್ ಮಾತನಾಡಿ, ಪಿಡಿಒಗಳ ಹಿತ ರಕ್ಷಣೆ ಸಂಘದ ಮುಖ್ಯ ಧ್ಯೇಯವಾಗಿದೆ. ಸರ್ಕಾರದ ಎಲ್ಲಾ ಯೋಜನೆಗಳನ್ನು ಗ್ರಾಮ ಮಟ್ಟದಲ್ಲಿ ಯಶಸ್ವಿಗಾಗಿ ಅನು?್ಟಾನಿಸುವಲ್ಲಿ ಪಿಡಿಒಗಳ ಪಾತ್ರ ಮಹತ್ವದ್ದಾಗಿದೆ. ಸಾಮಾಜಿಕ ಕಾರ್ಯಚಟುವಟಿಕೆಗಳನ್ನು ಹಮ್ಮಿಕೊಳ್ಳುವ ಮೂಲಕ ಸಂಘದಿಂದ ಅನೇಕ ಸಮಾಜಮುಖಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದರು.


ಇದೇ ವೇಳೆ ಕೊಡಗು ಜಿಲ್ಲಾ ಪಂಚಾಯತ್‌ನ ನೂತನ ಮನರೇಗಾ ಶಾಖೆಯನ್ನು ಜಿ.ಪಂ.ಸಿ ಇಒ ಮತ್ತು ಜಿ.ಪಂ. ಉಪ ಕಾರ್ಯದರ್ಶಿ ಧನರಾಜುರವರು ಉದ್ಘಾಟಿಸಿದರು. ಯೋಜನಾ ನಿರ್ದೇಶಕ ಜಗದೀಶ್, ಮುಖ್ಯ ಯೋಜನಾಧಿಕಾರಿ ರಾಜ್‌ಗೋಪಾಲ್, ಮುಖ್ಯ ಲೆಕ್ಕಾಧಿಕಾರಿ ಝೀವಲ್ ಖಾನ್, ಸಹಾಯಕ ಯೋಜನಾಧಿಕಾರಿ ಜೀವನ್ ಕುಮಾರ್, ಸಂಘದ ಉಪಾಧ್ಯಕ್ಷರಾದ ಲೋಕೇಶ್, ವೀಣಾ, ರಾಜ್ಯ ಪರಿ?ತ್ ಸದಸ್ಯ ಬಿ.ವೈ.ಅಶೋಕ್ ಕುಮಾರ್ ಮತ್ತು ವಿವಿಧ ಗ್ರಾ.ಪಂ.ನ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net