

ಗುರುಪುರ: ರಾಷ್ಟ್ರೀಯ ರಾಜಕೀಯದಲ್ಲಿ ಬಿಜೆಪಿ ವಾಮವಾರ್ಗದ ಮೂಲಕ ಜನರ ಹಕ್ಕು ಕಸಿದುಕೊಳ್ಳುತ್ತಿದೆ. ದೇಶದ ಪ್ರಜಾಪ್ರಭುತ್ವ ಅಪಾಯಕಾರಿ ಹಂತ ತಲುಪಿದೆ. ದೇಶದ ಸಂವಿಧಾನ ರಕ್ಷಣೆ ವಾಡುವಲ್ಲಿ ಪಕ್ಷದ ನಾಯಕರು ಮತ್ತು ಕಾರ್ಯಕರ್ತರು ಸನ್ನದ್ಧರಾಗಬೇಕು ಎಂದು ಎಸ್‌ಡಿಪಿಐ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಇಲ್ಯಾಸ್ ಮೊಹಮ್ಮದ್ ತುಂಬೆ ಹೇಳಿದರು.
ಗುರುವಾರ ಮಂಗಳೂರಿನ ಮಿಶನ್ ಸ್ಟ್ರೀಟ್‌ನ ಸಹಕಾರಿ ಸದನದಲ್ಲಿ ಸೋಶಿಯಲ್ ಡೆವಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ದ.ಕ ಜಿಲ್ಲಾ ನೂತನ ಕಚೇರಿ ಉದ್ಘಾಟನಾ ಸಭೆಯಲ್ಲಿ ಅವರು ಮಾತನಾಡಿದರು.
ಪಕ್ಷದ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ನೂತನ ಕಚೇರಿ ಉದ್ಘಾಟಿಸಿದರು. ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಅಧ್ಯಕ್ಷತೆ ವಹಿಸಿದ್ದರು. ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಹಾಗೂ ರಾಷ್ಟ್ರೀಯ ಕಾರ್ಯದರ್ಶಿಗಳಾದ ಆಲ್ಫೋನ್ಸೊ ಫ್ರಾಂಕೊ ಮತ್ತು ರಿಯಾಝ್ ಫರಂಗಿಪೇಟೆ ವಾತನಾಡಿದರು.
ಎಸ್‌ಡಿಪಿಐ ರಾಜ್ಯ ಉಪಾಧ್ಯಕ್ಷೆ ಶಾಹಿದಾ ತಸ್ನೀಮ್, ರಾಜ್ಯ ಕಾರ್ಯದರ್ಶಿ ರಿಯಾಜ್ ಕಡಂಬು, ಕೋಶಾಧಿಕಾರಿ ಅಮ್ಜದ್ ಖಾನ್, ವಿಮೆನ್ ಇಂಡಿಯಾ ಮೂವ್‌ಮೆಂಟ್ ರಾಜ್ಯಾಧ್ಯಕ್ಷೆ ಫಾತಿವಾ ನಸೀವಾ, ಸದಸ್ಯರಾದ ಅಥಾವುಲ್ಲ ಜೋಕಟ್ಟೆ, ವಕೀಲ ಮಜೀದ್ ಖಾನ್, ಶಾಹಿದ್ ಅಲಿ, ಮೂವ್‌ಮೆಂಟ್‌ನ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಿಶಾ ವಾಮಂಜೂರು ಮತ್ತಿತರರು ಉಪಸ್ಥಿತರಿದ್ದರು.
ಕಾರ್ಯಕ್ರಮಕ್ಕೂ ಮುನ್ನ ಪುರಭವನದಿಂದ ನೂತನ ಕಚೇರಿವರೆಗೆ ಮೆರವಣಿಗೆ ನಡೆಯಿತು. ಪಕ್ಷದ ನೂರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು.
ಶಮೀರ್ ಜೋಕಟ್ಟೆ ನಿರೂಪಿಸಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಶ್ರಫ್ ಅಡ್ಡೂರು ವಂದಿಸಿದರು.