ನೂತನ ಪ್ರವೇಶದ್ವಾರ, ಅಡುಗೆ ಮನೆ ಉದ್ಘಾಟನೆ

kdoava samaja
Published on

ಮಡಿಕೇರಿ: ಬೇಂಗ್ ನಾಡ್ ಕೊಡವ ಸಮಾಜದ ನೂತನ ಪ್ರವೇಶದ್ವಾರ ಮತ್ತು ಅಡುಗೆ ಮನೆಯನ್ನು ದಾನಿಗಳಾದ ತೇಲಪಂಡ ಪ್ರದೀಪ್ ಪೂವಯ್ಯ ಹಾಗೂ ನೂರೆರ ಮಿಟ್ಟು ಸುಬ್ಬಯ್ಯ ಉದ್ಘಾಟಿಸಿದರು.

ಕೊಡವ ಸಮಾಜದ ಅಧ್ಯಕ್ಷ ಬಾಚರಣಿಯಂಡ ದಿನೇಶ್ ಗಣಪತಿ, ಉಪಾಧ್ಯಕ್ಷರು, ಆಡಳಿತ ಮಂಡಳಿ ಸದಸ್ಯರು, ಸಮಾಜದ ಸದಸ್ಯರು ಮತ್ತಿತರರು ಹಾಜರಿದ್ದರು.

ವಾರ್ಷಿಕ ಮಹಾಸಭೆ: ಇದೇ ಸಂದರ್ಭ ಬೇಂಗ್ ನಾಡ್ ಕೊಡವ ಸಮಾಜದ ವಾರ್ಷಿಕ ಮಹಾಸಭೆ ಬಾಚರಣಿಯಂಡ ದಿನೇಶ್ ಗಣಪತಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಸಮಾಜದ ಸ್ಥಾಪಕ ಅಧ್ಯಕ್ಷರನ್ನು, ಇಲ್ಲಿಯವರೆಗೆ ಕಾರ್ಯನಿರ್ವಹಿಸಿದ ಅಧ್ಯಕ್ಷರನ್ನು ಹಾಗೂ ಬೇರೆ ಸಂಘ ಸಂಸ್ಥೆಗಳಲ್ಲಿ ಚುನಾಯಿತರಾಗಿ ಅಧಿಕಾರದಲ್ಲಿರುವ ಸಮಾಜದ ಸದಸ್ಯರನ್ನು ಸನ್ಮಾನಿಸಿ ಗೌರವಿಸಲಾಯಿತು.

ಕೊಡವ ಸಮಾಜದ ಉಪಾಧ್ಯಕ್ಷರು, ಕಾರ್ಯದರ್ಶಿ, ಖಜಾಂಚಿ, ಆಡಳಿತ ಮಂಡಳಿ ಸದಸ್ಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಮಾಜದ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಿದ್ದರು. ಉಪಾಧ್ಯಕ್ಷ ಕೇಕಡ ಮೊಣ್ಣಪ್ಪ, ತೇಲಪಂಡ ಲಕ್ಷ್ಮಿ ಪೆಮ್ಮಯ್ಯ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net