

ಇಳಕಲ್ಲ(ಗ್ರಾ): ನಗರದ ಹಳೇ ತಹಸೀಲ್ದಾರ್ ಕಚೇರಿ ಜಾಗದಲ್ಲಿ ನೂತನವಾಗಿ ನಿರ್ಮಿಸಿದ ಮಳಿಗೆಗಳನ್ನು ಶಾಸಕ ದೊಡ್ಡನಗೌಡ ಪಾಟೀಲ ಶುಕ್ರವಾರ ಉದ್ಘಾಟಿಸಿದರು.
ಗುರು ಮಹಾಂತ ಶ್ರೀಗಳು ಸಾನ್ನಿಧ್ಯ ವಹಿಸಿದ್ದರು. ಮಂಜುನಾಥ ಶೆಟ್ಟರ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಜಿ.ಎಚ್.ಗುಳೇದ, ಸ್ಥಾಯಿ ಸಮಿತಿ ಚೇರ್ಮನ್ ಗಣೇಶ ಯರಡೋಣಿ, ಮಾಜಿ ಅಧ್ಯಕ್ಷೆ ಶೋಭಾ ಆಮದಿಹಾಳ ಮತ್ತು ನಗರಸಭೆ ಸದಸ್ಯರಾದ ಲಕ್ಷ್ಮಣ ಗುರಂ, ಸೂಗುರೇಶ ನಾಗಲೋಟಿ, ಚಂದ್ರಶೇಖರ ಏಕಬೋಟೆ, ನಗರಸಭೆ ಪೌರಾಯುಕ್ತ ರಾಮಕೃಷ್ಣ ಸಿದ್ದನಕೊಳ್ಳ, ವ್ಯವಸ್ಥಾಪಕ ನಬೀಸಾಬ ಕಂದಗಲ್ಲ, ಬಿಜೆಪಿ ಮುಖಂಡರಾದ ವಿಠ್ಠಲ ಜಕ್ಕಾ, ಅರವಿಂದ ಮಂಗಳೂರ, ಬಸವರಾಜ ಗಾಣಿಗೇರ, ಎಂ.ವಿ.ಪಾಟೀಲ ಇತರರಿದ್ದರು.