

ನುಗ್ಗೇಹಳ್ಳಿ: ಹೋಬಳಿಯ ಅಕ್ಕನಹಳ್ಳಿ ಗ್ರಾಮದ ಇತಿಹಾಸ ಪ್ರಸಿದ್ಧ ಶ್ರೀ ಜೋಡಿ ಬಸವೇಶ್ವರ ಸ್ವಾಮಿ ಹಾಗೂ ಶ್ರೀ ಕಂಬದ ನರಸಿಂಹ ಸ್ವಾಮಿ ಮತ್ತು ಶ್ರೀ ಉಡಸಲಮ್ಮ ದೇವಿಯ ನೂತನ ದೇಗುಲಗಳ ಲೋಕಾರ್ಪಣೆ ಕಾರ್ಯಕ್ರಮ ನ.6ರಿಂದ 8ರ ಶುಕ್ರವಾರದವರೆಗೆ ನಡೆಯಲಿದೆ.
ತಿಪಟೂರು ತಾಲೂಕು ಕೆರಗೋಡಿ ರಂಗಾಪುರ ಮಠದ ಶ್ರೀ ಗುರು ಪರದೇಶಿ ಕೇಂದ್ರ ಸ್ವಾಮೀಜಿ ಸಾನ್ನಿಧ್ಯದಲ್ಲಿ ದೇಗುಲಗಳ ಲೋಕಾರ್ಪಣೆ, ವಿಮಾನ ಗೋಪುರ ಕಳಸ ಕುಂಭಾಭಿಷೇಕ ಮಹೋತ್ಸವ ನಡೆಯಲಿದೆ.
ನವೆಂಬರ್ 6ರ ಬುಧವಾರ ಸಂಜೆ ಗಂಗಾ ಪೂಜೆ, 7ರ ಗುರುವಾರ ಬ್ರಾಹ್ಮಿ ಮುಹೂರ್ತದಲ್ಲಿ ಕಲಾ ವೃದ್ಧಿ ಹೋಮ, ನರಸಿಂಹಸ್ವಾಮಿ ಮೂಲ ಮಂತ್ರ ಹೋಮ, ಪ್ರಾಣ ಪ್ರತಿಷ್ಠಾಪನಾ ಹೋಮ, ನಿತ್ಯ ಹೋಮ, ಮಹಾಪೂರ್ಣಾಹುತಿ, ಪಂಚಾಮೃತ ಅಭಿಷೇಕ, ಕುಂಭಾಭಿಷೇಕ, ಮಹಾಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗ ನಡೆಯಲಿದೆ.
ನವೆಂಬರ್ 7ರ ಬೆಳಗ್ಗೆ 10.30ಕ್ಕೆ ಧಾರ್ಮಿಕ ಕಾರ್ಯಕ್ರಮ ನೆರವೇರಲಿದೆ. ಕೆರಗೋಡಿ ರಂಗಾಪುರ ಮಠದ ಶ್ರೀ ಗುರು ಪರದೇಶಿಕೇಂದ್ರ ಸ್ವಾಮೀಜಿ, ಹಾಸನದ ಆದಿಚುಂಚನಗಿರಿ ಶ್ರೀ ಶಂಬುನಾಥ ಸ್ವಾಮೀಜಿ, ನುಗ್ಗೆಹಳ್ಳಿ ಶ್ರೀ ಮಹೇಶ್ವರ ಶಿವಾಚಾರ್ಯ ಸ್ವಾಮೀಜಿ, ಶ್ರೀ ಶಿವಪುತ್ರನಾಥ ಸ್ವಾಮೀಜಿ, ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ, ಶ್ರೀ ಚಂದ್ರಶೇಖರ ಗುರೂಜಿ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಶಾಸಕ ಸಿ.ಎನ್.ಬಾಲಕೃಷ್ಣ, ಸಂಸದ ಶ್ರೇಯಸ್ ಪಟೇಲ್, ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಎ.ಗೋಪಾಲಸ್ವಾಮಿ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಂಜುಳಾ ಬೋರೇಗೌಡ, ಮಾಜಿ ಶಾಸಕ ಪ್ರೀತಮ್ ಗೌಡ, ಒಕ್ಕಲಿಗರ ಸಂಘದ ನಿರ್ದೇಶಕ ಬಿ.ಪಿ.ಮಂಜೇಗೌಡ, ಒಕ್ಕಲಿಗರ ಸಂಘದ ಮಾಜಿ ನಿರ್ದೇಶಕ ರಾಮಚಂದ್ರ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಂ.ಎ.ರಂಗಸ್ವಾಮಿ, ಲಲಿತ್ ರಾಘವ್, ಎಂ.ಶಂಕರ್, ಎಂ.ಗಿರೀಶ್, ಎ.ಸಿ.ಆನಂದ್ ಕುಮಾರ್ ಇತರರು ಭಾಗವಹಿಸಲಿದ್ದಾರೆ ಎಂದು ದೇವಾಲಯ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.