

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜು ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಯುವ ರೆಡ್‌ಕ್ರಾಸ್ ಘಟಕದ ಉದ್ಘಾಟನಾ ಸಮಾರಂಭ ಕಾಲೇಜಿನ ಸಭಾಂಗಣದಲ್ಲಿ ಇತ್ತೀಚೆಗೆ ನಡೆಯಿತು.
ಸುಳ್ಯ ಕೆವಿಜಿ ಪಾಲಿಟೆಕ್ನಿಕ್‌ನ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಯುವ ರೆಡ್‌ಕ್ರಾಸ್ ಘಟಕದ ಯೋಜನಾಧಿಕಾರಿ ಚಂದ್ರಶೇಖರ ಬಿಳಿನೆಲೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಯುವಕ-ಯುವತಿಯರಿಗೆ ವ್ಯಕ್ತಿತ್ವ ವಿಕಸನ, ದೇಶಪ್ರೇಮ ಮತ್ತು ಸಹಾಯ ಮನೋಭಾವಕ್ಕೆ ಈ ರೀತಿಯ ಸ್ವಯಂ ಸೇವಾ ಸಂಘಟನೆಗಳು ಅವಶ್ಯಕ. ಪಾಠದ ಜತೆಗೆ ಪಠ್ಯೇತರ ಚಟುವಟಿಕೆಗಳು ಜೀವನಕ್ಕೆ ಪೂರಕ ಎಂದರು.
ಪ್ರಾಂಶುಪಾಲ ಸಂತೋಷ್ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಯುವ ರೆಡ್‌ಕ್ರಾಸ್ ಘಟಕದ ಯೋಜನಾಧಿಕಾರಿ ಅವನೀಶ್ ಪಿ. ಮತ್ತು ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿ ಪ್ರಕಾಶ್ ಗೌಡ ಪ್ರತಿಜ್ಞಾ ವಿಧಿ ಬೋಧಿಸಿದರು. ಸ್ವಯಂ ಸೇವಕ ಅಮಿತ್ ಕುಮಾರ್ ಸ್ವಾಗತಿಸಿದರು. ಮಿಲನ ವಂದಿಸಿದರು. ಸ್ವಯಂ ಸೇವಕಿ ಭವಿತಾ ಕಾರ್ಯಕ್ರಮ ನಿರೂಪಿಸಿದರು.