ಗ್ಯಾರಂಟಿ ಪ್ರಾಧಿಕಾರದ ಕಚೇರಿ ಉದ್ಘಾಟನೆ

Inauguration of Office of Guarantee Authority
Published on

ಮಡಿಕೇರಿ:

ಗ್ಯಾರೆಂಟಿ ಅನುಷ್ಠಾನ ಪ್ರಾಧಿಕಾರದ ಕೊಡಗು ಜಿಲ್ಲಾ ಅಧ್ಯಕ್ಷ  ಧರ್ಮಜ ಉತ್ತಪ್ಪ ಅವರ ನೂತನ ಕಚೇರಿಯನ್ನು ಜಿಲ್ಲಾ ಪಂಚಾಯತ್ ಕಟ್ಟಡದಲ್ಲಿ ಆರಂಭಿಸಲಾಗಿದೆ. ಮಡಿಕೇರಿ ಶಾಸಕ ಡಾ. ಮಂತರ್ ಗೌಡ‌ ಗುರುವಾರ ಉದ್ಘಾಟಿಸಿದರು. ನಂತರ‌ ಮಾತನಾಡಿ ಜಿಲ್ಲೆಯಲ್ಲಿ ಪ್ರತಿಯೊಬ್ಬರಿಗೂ ಸರ್ಕಾರದ ಗ್ಯಾರಂಟಿ ಯೋಜನೆ ತಲುಪಿಸುವಲ್ಲಿ ಅಧ್ಯಕ್ಷರದ್ದು ಮುಖ್ಯ ಭೂಮಿಕೆ ಆಗಿರುತ್ತದೆ ಎಂದು ಹೇಳಿದರು.

    ಈ ಸಂದರ್ಭ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯೂ ಆದ ಕೊಡಗು ಜಿಲ್ಲಾ ಉಸ್ತುವಾರಿ  ಡಿ.ಕೆ. ಬ್ರಿಜೇಶ್, ಮಾಜಿ ಎಂಎಲ್ಸಿ ವೀಣಾ ಅಚ್ಚಯ್ಯ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಪಿ. ಚಂದ್ರಕಲಾ, ಜಿಲ್ಲಾ ಹಾಗೂ ತಾಲೂಕು ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರುಗಳು, ಸದಸ್ಯರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳು, ಮುಂಚೂಣಿ ಘಟಕಗಳ ಅಧ್ಯಕ್ಷರುಗಳು, ಪಕ್ಷದ ಪ್ರಮುಖರು ಹಾಗೂ ಫಲಾನುಭವಿಗಳು ಇದ್ದರು. 

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net