ಸಮಾಜದಲ್ಲಿ ಬಾಲಕಾರ್ಮಿಕರಿಲ್ಲದಂತೆ ಮಾಡಿ

20 BK 04
ಬಸವಕಲ್ಯಾಣದ ಎಂಪಿಎಸ್ ಶಾಲೆಯಲ್ಲಿ ಏರ್ಪಡಿಸಿದ್ದ ಬಾಲ್ಯವಸ್ಥೆ ಮತ್ತು ಕಿಶೋರಾವಸ್ಥೆ ಕಾರ್ಮಿಕ ಕಾಯ್ದೆ ಅನುಷ್ಠಾನದ ಕುರಿತು ಒಂದು ದಿನದ ತರಬೇತಿಯನ್ನು ತಹಸೀಲ್ದಾರ್ ಶಾಂತಗೌಡ ಬಿರಾದಾರ ಉದ್ಘಾಟಿಸಿದರು. ಡಾ ಅಪರ್ಣ, ಅರ್ಜುನ ಸೀತಾಳಗೇರಾ, ಸಂತೋಷ ಗಾಯಕವಾಡ, ಶ್ರೀದೇವಿ ಇತರರಿದ್ದರು.
Published on

ಬಸವಕಲ್ಯಾಣ: ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಸಮಾಜದ ಜವಾಬ್ದಾರಿಯಾಗಿದೆ. ಮಕ್ಕಳ ಹಕ್ಕುಗಳನ್ನು ರಕ್ಷಿಸುವ ಜತೆಗೆ ಹಾಗೂ ಬಾಲ ಕಾರ್ಮಿಕರು ಇರದಂತೆ ನೋಡಿಕೊಳ್ಳಬೇಕಿದೆ ಎಂದು ತಹಸೀಲ್ದಾರ್ ಶಾಂತಗೌಡ ಬಿರಾದಾರ ಹೇಳಿದರು.

ನಗರದ ಎಂಪಿಎಸ್ ಶಾಲೆಯಲ್ಲಿ ಗ್ರಾಮೀಣ ಶಿಕ್ಷಣ ಮತ್ತು ಆರೋಗ್ಯಇಲಾಖೆಯಿಂದ ಬಾಲ್ಯವಸ್ಥೆ ಮತ್ತು ಕಿಶೋರಾವಸ್ಥೆ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ ೧೯೮೬ ತಿದ್ದುಪಡಿ ೨೦೧೬ರ ಕುರಿತು ಅನುಷ್ಠಾನಾಧಿಕಾರಿಗಳಿಗೆ ಶನಿವಾರ ಏರ್ಪಡಿಸಿದ್ದ ಒಂದು ದಿನದ ತರಬೇತಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಬಾಲಕಾರ್ಮಿಕ ಮುಕ್ತ ತಾಲೂಕು ಮಾಡಲು ಅನುಷ್ಠಾನಾಧಿಕಾರಿಗಳು ಕಾಳಜಿ ವಹಿಸಿ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.

ಸಂಸ್ಥೆಯ ನಿರ್ದೇಶಕಿ ಸರಸ್ವತಿ ಪ್ರಾಸ್ತಾವಿಕ ಮಾತನಾಡಿ, ತಾಲೂಕಿನ ೪೦ ಗ್ರಾಮಗಳಲ್ಲಿ ಈ ಸಂಸ್ಥೆ ಕಾರ್ಯನಿರ್ವಹಿಸುತ್ತಿದ್ದು, ಮಹಿಳೆ ಮತ್ತು ಮಕ್ಕಳ ರಕ್ಷಣೆಯಲ್ಲಿ ಕೆಲಸ ಮಾಡುತ್ತಿದೆ. ಮಕ್ಕಳಿಗಾಗಿ ಕಾಯ್ದೆ ಕಾನೂನುಗಳಿದ್ದರೂ ಸಹ ಇನ್ನೂ ಅನೇಕ ಮಕ್ಕಳು ಬಾಲ ಕಾರ್ಮಿಕರಾಗಿ ದುಡಿಯುತ್ತಿದ್ದಾರೆ. ಹೀಗಾಗಿ ನಾವೆಲ್ಲರೂ ಸೇರಿ ಬಾಲ ಕಾರ್ಮಿಕತೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಕೆಲಸ ಮಾಡುವ ಅವಶ್ಯಕತೆ ಇದೆ ಎಂದು ಹೇಳಿದರು.

ಸರ್ಕಾರಿ ಆಸ್ಪತ್ರೆ ಸಿಎಂಒ ಡಾ ಅಪರ್ಣ, ಕಾರ್ಮಿಕ ಕಲ್ಯಾಣ ಇಲಾಖೆ ಯೋಜನಾ ನಿರ್ದೇಶಕ ಅರ್ಜುನ ಸೀತಾಳಗೇರಾ, ನಿರೀಕ್ಷಕ ಸಂತೋಷ ಗಾಯಕವಾಡ, ಮಹಿಳಾ ಮತ್ತು ಮಕ್ಕಳ ಅಭಿವ್ಙದ್ಧಿ ಇಲಾಖೆ ಮೇಲ್ವಿಚಾರಕಿ ಶ್ರೀದೇವಿ ಇತರರಿದ್ದರು.

ಯೋಜನಾ ಸಂಯೋಜಕ ನಾಗರಾಜ ಶೀಲವಂತ ಸ್ವಾಗತಿಸಿದರು. ಸಂಪತ ಕಟ್ಟಿ ನಿರೂಪಣೆ ಮಾಡಿದರು. ಜಿಲ್ಲಾ ಸಂಯೋಜಿಕಿ ಸ್ನೇಹಲತಾ ಮೆತ್ರೆ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net