

ವಿಜಯವಾಣಿ ಸುದ್ದಿಜಾಲ ಧಾರವಾಡ
ಅಮೃತ ಭಾರತ ಸ್ಟೇಷನ್ ಯೋಜನೆಯಡಿ ಪುನರಾಭಿವೃದ್ಧಿಗೊಂಡ ದೇಶದ ರೈಲ್ವೆ ನಿಲ್ದಾಣಗಳ ಮತ್ತು ಇತರ ಯೋಜನೆಗಳ ಉದ್ಘಾಟನಾ ಸಮಾರಂಭವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ವೀಡಿಯೋ ಕಾನ್ಫರೆನ್ಸ್ ಮೂಲಕ ಮೇ 22ರಂದು ಬೆಳಗ್ಗೆ 10.30ಕ್ಕೆ ಉದ್ಘಾಟಿಸುವರು. ಧಾರವಾಡ ರೈಲು ನಿಲ್ದಾಣದಲ್ಲಿ ಸಮಾರಂಭ ಆಯೋಜಿಸಲಾಗಿದೆ ಎಂದು ವಿಭಾಗೀಯ ರೈಲ್ವೆ ವ್ಯವಸ್ಥಾಪಕರು ತಿಳಿಸಿದ್ದಾರೆ.