ಹೆದ್ದಾರಿ ಕಾಮಗಾರಿ ಮುಂದಿನ ವರ್ಷ ಪೂರ್ಣ : ಮಹಮ್ಮದ್ ರಿಯಾಸ್ ಮಾಹಿತಿ

New Project (23)
Published on

ಕಾಸರಗೋಡು: ರಾಷ್ಟ್ರೀಯ ಹೆದ್ದಾರಿ 66ರ ಷಟ್ಪಥ ಕಾಮಗಾರಿಯನ್ನು 2025ರ ಡಿಸೆಂಬರ್ ವೇಳೆಗೆ ಪೂರ್ಣಗೊಳಿಸಲಾಗುವುದು ಎಂದು ಲೋಕೋಪಯೋಗಿ ಮತ್ತು ಪ್ರವಾಸೋದ್ಯಮ ಇಲಾಖೆ ಸಚಿವ ಪಿ.ಎ.ಮಹಮ್ಮದ್ ರಿಯಾಸ್ ತಿಳಿಸಿದ್ದಾರೆ. ಮಡಿಕೈ ಪಂಚಾಯಿತಿ ಪುಲಿಕಲ್ ಸೇತುವೆ ಲೋಕಾರ್ಪಣೆ ಮಾಡಿ ಮಾತನಾಡಿದರು.

ಶಾಸಕ ಇ.ಚಂದ್ರಶೇಖರನ್ ಅಧ್ಯಕ್ಷತೆ ವಹಿಸಿದ್ದರು. ಕೆಆರ್‌ಎಫ್‌ಬಿ ಕಾರ್ಯಪಾಲಕ ಅಭಿಯಂತ ಕೆ.ಪಿ.ವಿನೋದ್ ಕುಮಾರ್ ವರದಿ ಮಂಡಿಸಿದರು. ಜಿಪಂ ಅಧ್ಯಕ್ಷೆ ಪಿ.ಬೇಬಿ ಬಾಲಕೃಷ್ಣನ್, ಕಾಞಂಗಾಡು ಬ್ಲಾಕ್ ಪಂಚಾಯಿತಿ ಉಪಾಧ್ಯಕ್ಷೆ ಕೆ.ವಿ.ಶ್ರೀಲತಾ, ಕಾಞಂಗಾಡ್ ಬ್ಲಾಕ್ ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಅಬ್ದುಲ್ ರಹಮಾನ್, ವಾರ್ಡ್ ಸದಸ್ಯೆ ಎಂ.ರಜಿತಾ, ಮಾನ್ ಮಡಿಕೈ ಗ್ರಾಪಂ ಮಾಜಿ ಅಧ್ಯಕ್ಷ ಸಿ.ಪ್ರಭಾಕರನ್, ರಾಜಕೀಯ ಪಕ್ಷದ ಪ್ರತಿನಿಧಿಗಳಾದ ಎಂ.ರಾಜನ್, ಬಂಗಳಂ ಕುಞಿಕೃಷ್ಣನ್, ಪಿ.ರಾಜು, ನಾರಾಯಣನ್ ಮಂಡೋಟ್ ಮತ್ತು ಎ.ವೇಲಾಯುಧನ್ ಉಪಸ್ಥಿತರಿದ್ದರು. ಗ್ರಾಪಂ ಅಧ್ಯಕ್ಷೆ ಎಸ್.ಪ್ರೀತಾ ಸ್ವಾಗತಿಸಿದರು. ಉಪಾಧ್ಯಕ್ಷ ವಿ.ಪ್ರಕಾಶ್ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net