ರೇಬಿಸ್ ಲಸಿಕೆ ವಿತರಣಾ ಕಾರ್ಯಕ್ರಮ ಉದ್ಘಾಟನೆ

Published on

ಸುಳ್ಯ: ಸರ್ಕಾರದಿಂದ ನೀಡುವ ಸೌಲಭ್ಯಗಳನ್ನು ಬಳಸಿ ಹೈನುಗಾರಿಕೆಯಲ್ಲಿ ತೊಡಗಿಕೊಂಡರೆ ಬದುಕಿನಲ್ಲಿ ಯಶಸ್ಸು ಸಾಧ್ಯ ಎಂದು ಶಾಸಕಿ ಭಾಗೀರಥಿ ಮುರುಳ್ಯ ತಿಳಿಸಿದರು.

ದಕ್ಷಿಣ ಕನ್ನಡ ಜಿಪಂ, ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಸುಳ್ಯ ವತಿಯಿಂದ ಸುಳ್ಯದ ಪಶುಪಾಲನಾ ಇಲಾಖಾ ಕಚೇರಿಯಲ್ಲಿ ರಬ್ಬರ್ ನೆಲಹಾಸು ವಿತರಣೆ, ರೇಬಿಸ್ ಲಸಿಕೆ ವಿತರಣಾ ಕಾರ್ಯಕ್ರಮದ ಉದ್ಘಾಟನೆ ಹಾಗೂ ಪಶುಸಖಿಯರಿಗೆ ಕಿಟ್ ವಿತರಣಾ ಕಾರ್ಯಕ್ರಮವನ್ನು ಶನಿವಾರ ಉದ್ಘಾಟಿಸಿ ಮಾತನಾಡಿದರು.

ಹೈನುಗಾರಿಕಾ ಕ್ಷೇತ್ರದಲ್ಲಿ ಸುಳ್ಯ ತಾಲೂಕಿನಲ್ಲಿ ಅತಿ ಹೆಚ್ಚು ಮಂದಿ ಕೃಷಿಕರು ತೊಡಗಿಸಿಕೊಂಡಿದ್ದಾರೆ. ಮುಂದೊಂದು ದಿನ ಹೈನುಗಾರಿಕೆಯಲ್ಲಿ ಸುಳ್ಯ ತಾಲೂಕು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆಯುವಂತಾಗಬೇಕು. ಈ ನಿಟ್ಟಿನಲ್ಲಿ ಪ್ರಯತ್ನ ಮಾಡಬೇಕು ಎಂದು ಕರೆ ನೀಡಿದರು.
ಪಶುಪಾಲನೆ ಮತ್ತು ಪಶುವೈದ್ಯಕೀಯ ಇಲಾಖೆ ಮುಖ್ಯ ವೈದ್ಯಾಧಿಕಾರಿ ಡಾ.ನಿತಿನ್ ಪ್ರಭು, ಪಶುವೈದ್ಯಾಧಿಕಾರಿಗಳಾದ ಡಾ.ನಾಗರಾಜ, ಡಾ.ವೆಂಕಟಾಚಲಪತಿ ಜೆ.ಎನ್., ಡಾ.ಸೂರ್ಯನಾರಾಯಣ ಬಿ.ಕೆ., ಜಾನುವಾರು ಅಭಿವೃದ್ಧಿ ಅಧಿಕಾರಿ ಪುಷ್ಪರಾಜ್ ಕೆ.ಮತ್ತಿತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net