

ವಿಜಯವಾಣಿ ಸುದ್ದಿಜಾಲ ಧಾರವಾಡ
ದೇಶದ ಅಭಿವೃದ್ಧಿಯಲ್ಲಿ ಸುಗಮ ಮತ್ತು ಸಂಘಟಿತ ರೈಲು ಸಾರಿಗೆ ವ್ಯವಸ್ಥೆಯು ಪ್ರಮುಖ ಪಾತ್ರ ವಹಿಸುತ್ತದೆ. ಭಾರತೀಯ ರೈಲ್ವೆ ದೇಶದ ಪ್ರಮುಖ ಸಾರಿಗೆ ಸಾಧನವಾಗಿದೆ. ಭಾರತ ಸರ್ಕಾರ ರೈಲು ಸೇವೆಯನ್ನು ಉತ್ತಮಗೊಳಿಸುವುದು ಮತ್ತು ಮೂಲ ಸೌಕರ್ಯಗಳನ್ನು ಮೇಲ್ದರ್ಜೆಗೇರಿಸಲು ಬದ್ಧವಾಗಿದೆ ಎಂದು ರಾಜ್ಯಪಾಲ ಥಾವರಚಂದ್ ಗೆಹಲೋತ್ ಹೇಳಿದರು.
ನಗರದ ರೈಲ್ವೆ ನಿಲ್ದಾಣದಲ್ಲಿ ಗುರುವಾರ ಆಯೋಜಿಸಿದ್ದ ಅಮೃತ್ ಭಾರತ್ ಸ್ಟೇಷನ್ ಯೋಜನೆಯಡಿ ಅಭಿವೃದ್ಧಿಗೊಂಡ ರೈಲ್ವೆ ನಿಲ್ದಾಣದ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಪ್ರಧಾನಿ ನರೇಂದ್ರ ಮೋದಿಯವರು 2023- 24ನೇ ಸಾಲಿನಲ್ಲಿ ಅಮೃತ್ ರೈಲ್ವೆ ನಿಲ್ದಾಣ ಯೋಜನೆಯಡಿ 1,000ಕ್ಕೂ ಹೆಚ್ಚು ನಿಲ್ದಾಣಗಳ ಆಧುನೀಕರಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ್ದರು. ರಾಜ್ಯದ ಮುನಿರಾಬಾದ್, ಬಾಗಲಕೋಟೆ, ಗದಗ, ಗೋಕಾಕ್ ಮತ್ತು ಧಾರವಾಡ ಸೇರಿ ದೇಶದ 103 ರೈಲ್ವೆ ನಿಲ್ದಾಣಗಳನ್ನು ವರ್ಚುವಲ್ ವೇದಿಕೆ ಮೂಲಕ ಉದ್ಘಾಟಿಸಿದ್ದಾರೆ. ರೈಲು, ನಿಲ್ದಾಣಗಳು, ಹಳಿಗಳು ಮತ್ತು ಸಿಗ್ನಲ್ ವ್ಯವಸ್ಥೆಯನ್ನು ಅತ್ಯುತ್ತಮವಾಗಿಸಲು ಬಯಸುತ್ತಾರೆ. ಈ ದಿಶೆಯಲ್ಲಿ ದೇಶಾದ್ಯಂತ ರೈಲ್ವೆ ಯೋಜನೆಗಳು ವೇಗವಾಗಿ ಅನುಷ್ಠಾನಗೊಳ್ಳುತ್ತಿವೆ ಎಂದರು.
ಭಾರತೀಯ ರೈಲ್ವೆಯು ಪ್ರಯಾಣಿಕರಿಗೆ ಅತ್ಯಂತ ಆರಾಮದಾಯಕ ಸೇವೆ ಒದಗಿಸುತ್ತಿದೆ. ಸರಕು ಸಾಗಣೆಗೆ ರೈಲ್ವೆ ಸೇವೆಯ ಅವಲಂಬನೆ ಹೆಚ್ಚುತ್ತಿದೆ. ಆತ್ಮನಿರ್ಭರ ಭಾರತ ಅಭಿಯಾನದ ಮೂಲಕ ಮೂಲ ಸೌಕರ್ಯ ಅಭಿವೃದ್ಧಿ ಮತ್ತು ಉತ್ಪಾದನಾ ಯೋಜನೆಗಳನ್ನು ಆರಂಭಿಸಲಾಗಿದೆ. ಬಲಿಷ್ಠ, ಸಮೃದ್ಧ ಮತ್ತು ಸ್ವಾವಲಂಬಿ ಭಾರತ ನಿರ್ಮಿಸಲು ನಾವೆಲ್ಲರೂ ಕೈ ಜೋಡಿಸೋಣ ಎಂದರು.
ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಹುಬ್ಬಳ್ಳಿ- ಧಾರವಾಡ ನಗರಾಭಿವೃದ್ಧಿ ಪ್ರಾಽಕಾರದ ಅಧ್ಯಕ್ಷ ಶಾಕೀರ ಸನದಿ, ಮೇಯರ್ ರಾಮಪ್ಪ ಬಡಿಗೇರ ಮಾತನಾಡಿದರು. ಮಾಜಿ ಶಾಸಕ ಅಮೃತ ದೇಸಾಯಿ, ರೈಲ್ವೆ ಐಜಿಪಿ ಆರ್.ಎಸ್.ಪಿ. ಸಿಂಗ್ ವೇದಿಕೆಯಲ್ಲಿದ್ದರು.
ಹುಬ್ಬಳ್ಳಿ ನೈಋತ್ಯ ರೈಲ್ವೆಯ ಪ್ರಧಾನ ವ್ಯವಸ್ಥಾಪಕ ನಿರ್ದೇಶಕ ಮುಕುಲ್ ಸರನ್ ಮಾಥುರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ರೈಲ್ವೆ ಅಽಕಾರಿ ಅಂಜಿನಿ ಎಚ್. ವಂದಿಸಿದರು. ಅಪರ ಜಿಲ್ಲಾಽಕಾರಿ ಗೀತಾ ಸಿ.ಡಿ., ಜನಪ್ರತಿನಿಽಗಳು, ರೈಲ್ವೆ ಬಳಕೆದಾರ ಸಂಘದ ಸದಸ್ಯರು ಉಪಸ್ಥಿತರಿದ್ದರು.