

ಮಡಿಕೇರಿ: ಏಳನೇ ಹೊಸ ಕೋಟೆಯಲ್ಲಿ ನೂತನವಾಗಿ ನಿರ್ಮಿಸಿರುವ ಸಂತ ಸೆಬಾಸ್ಟೀನ್ ರೋಮನ್ ಕ್ಯಾಥೋಲಿಕ್ ದೇವಾಲಯ ವಿವಿಧ ಧಾರ್ಮಿಕ ವಿಧಾನಗಳೆಂದಿಗೆ ಏ.30ಕ್ಕೆ ಉದ್ಘಾಟನೆಯಾಗಲಿದೆ.
ಸುಂಟಿಕೊಪ್ಪದ ಬೆಳ್ತಂಗಡಿ ಧರ್ಮಕ್ಷೇತ್ರದ ಧರ್ಮಾಧ್ಯಕ್ಷ ಬಿಷಪ್ ಮಾರ್‌ಲಾರೆನ್ಸ್ ಮುಕುಜಿ ಅವರು ಆರ್ಶಿವಚನ ನೀಡುವ ಮೂಲಕ ದೇವಾಲಯ ಉದ್ಘಾಟಿಸಲಿದ್ದಾರೆ. ಮಡಿಕೇರಿ ಶಾಸಕ ಡಾ.ಮಂತರ್‌ಗೌಡ ಅವರು ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ.
ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಬೆಳ್ತಂಗಡಿ ಧರ್ಮಕ್ಷೇತ್ರದ ಜೋಸೆಫ್ ವಲಿಯಪರಂಬಿಲ್, ಸಿದ್ದಾಪುರ ಸಂತ ಮೇರಿ ಚರ್ಚಿನ ವಲಯ ಧರ್ಮಗುರು ಜೋಜಿ ವಡಕ್ಕಿವೀಟಿ, ಮೈಸೂರಿನ ಸೇಂಟ್ ಪೌಲಸ್ ಪ್ರಾಂತ್ಯದ ಧರ್ಮಗುರು ಆಗಸ್ಟೀನ್ ಪಾಯಂಪಳ್ಳಿ, ತಲಚೇರಿಯ ಸಂತ ಜೋಸೆಫರ ಪ್ರಾಂತ್ಯದ ಧರ್ಮಗುರು ಡಾ. ತ್ರೇಸಾ ಪಾಲಕ್ಕಾಡ್, ಚೆರುಪುಜಾ ಪ್ರಾಂತ್ಯದ ಧರ್ಮಗುರು ಜೋಸ್ ವೆಲ್ಟಿಕಲ್, 7ನೇ ಹೊಸಕೋಟೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಇ.ಬಿ.ಜೋಸೆಫ್ ಪಾಲ್ಗೊಳ್ಳಲಿದ್ದಾರೆ ಎಂದು ಧರ್ಮಗುರು ಸೆಬಾಸ್ಟೀನ್ ಪೂವತ್ತಿಗಲ್ ತಿಳಿಸಿದ್ದಾರೆ.