ಸರಸ್ವತಿ ವಿದ್ಯಾಲಯ ಪ್ರಾರಂಭೋತ್ಸವ

gangolly
ಗಂಗೊಳ್ಳಿ ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ನಡೆಯಿತು
Published on

ಗಂಗೊಳ್ಳಿ: ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು.
ವಿದ್ಯಾರ್ಥಿಗಳನ್ನು ಶಿಕ್ಷಕರು ಸಂಪ್ರದಾಯಬದ್ಧವಾಗಿ ಸ್ವಾಗತಿಸಿದರು. ಮುಖ್ಯಶಿಕ್ಷಕ ಜಿ.ವಿಶ್ವನಾಥ ಭಟ್ ಅಧ್ಯಕ್ಷತೆ ವಹಿಸಿದ್ದರು. ಆಡಳಿತ ಮಂಡಳಿ ಅಧ್ಯಕ್ಷ ಡಾ.ಕಾಶೀನಾಥ ಪಿ.ಪೈ ಮತ್ತು ಸಂಚಾಲಕ ಎನ್.ಸದಾಶಿವ ನಾಯಕ್ ಶುಭ ಹಾರೈಸಿದರು. ವಿದ್ಯಾರ್ಥಿಗಳಿಗೆ ಸರ್ಕಾರದಿಂದ ನೀಡಲಾದ ಪಠ್ಯಪುಸ್ತಕ ಹಾಗೂ ಶಾಲಾ ಆಡಳಿತ ಮಂಡಳಿ ವತಿಯಿಂದ ನೀಡಲಾದ ಸಮವಸ್ತ್ರ, ಬೆಲ್ಟ್‌ಗಳನ್ನು ವಿತರಿಸಿ ಶುಭ ಕೋರಲಾಯಿತು.

ಶಿಕ್ಷಕ-ರಕ್ಷಕ ಸಮಿತಿ ಕಾರ್ಯದರ್ಶಿ ಜಿ.ಅಜಿತ್ ಭಟ್, ಶಿಕ್ಷಕರಾದ ಮಹಾಬಲ ಆಚಾರ್ಯ, ದೇವು, ಲಕ್ಷ್ಮೀ ಖಾರ್ವಿ, ರೇಖಾ ಖಾರ್ವಿ, ಮಮತಾ ಖಾರ್ವಿ, ಭೂದೇವಿ, ಅಕ್ಷತಾ ವಿನಯ್, ಅಂಗನವಾಡಿ ಕಾರ್ಯಕರ್ತೆ ಕಮಲಾ ಮೊದಲಾದವರು ಉಪಸ್ಥಿತರಿದ್ದರು

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net