

ಮೂಡುಬಿದಿರೆ: ಸರ್ಕಾರಿ ಶಾಲೆಯಲ್ಲಿ ಸಂಸ್ಕಾರಯುತ ಶಿಕ್ಷಣ ಸಿಗುತ್ತದೆ. ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆ ಬಗ್ಗೆಯೂ ಅರಿವು ಅವರಲ್ಲಿರುತ್ತದೆ. ಪಾಲಕರು ಮಕ್ಕಳ ಮೇಲೆ ನಿಗಾವಹಿಸಬೇಕು. ಮಕ್ಕಳ ಶೈಕ್ಷಣಿಕ ಬೆಳವಣಿಗೆ, ಗುಣ ನಡತೆ ಬಗ್ಗೆ ಶಿಕ್ಷಕರ ಜತೆ ಸಮಾಲೋಚಿಸಬೇಕು ಎಂದು ಶಾಸಕ ಉಮಾನಾಥ ಕೋಟ್ಯಾನ್ ಹೇಳಿದರು.
ಇರುವೈಲು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 41.7 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ಮೂರು ವಿವೇಕ ಕೊಠಡಿಗಳನ್ನು ಉದ್ಘಾಟಿಸಿ ಮಾತನಾಡಿದರು.
ಹೈಕೋರ್ಟ್ ಹಿರಿಯ ವಕೀಲ ಐ.ತಾರಾನಾಥ ಪೂಜಾರಿ ಮಾತನಾಡಿ, ಶಾಲೆಯಲ್ಲಿ ಎಲ್ಲ ಸೌಕರ್ಯಗಳು ದೊರಕುವ ನಿಟ್ಟಿನಲ್ಲಿ ಪ್ರಯತ್ನಿಸಲಾಗುವುದು ಎಂದರು.
ಶಾಲಾ ಶತಮಾನೋತ್ಸವ ಸಮಿತಿ ಅಧ್ಯಕ್ಷ ಮೋಹನ್ ಟಿ., ಗುತ್ತಿಗೆದಾರ ತಿಮ್ಮಪ್ಪ ಅವರನ್ನು ಗೌರವಿಸಲಾಯಿತು. ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷಪ್ಪ ಎಚ್.ಎಸ್., ಇರುವೈಲು ಗ್ರಾಪಂ ಅಧ್ಯಕ್ಷೆ ಲಲಿತಾ ಮುಗೇರ, ಉಪಾಧ್ಯಕ್ಷ ವಲೇರಿಯನ್ ಕುಟಿನ್ಹಾ, ಎಸ್‌ಡಿಎಂಸಿ ಅಧ್ಯಕ್ಷ ಸುನೀಲ್ ಕುಮಾರ್ ಕಟ್ಟಣಿಗೆ, ರುಕ್ಕಯ್ಯ ಪೂಜಾರಿ ಅಳಿಯೂರು, ಸತೀಶ್ಚಂದ್ರ ಸಾಲ್ಯಾನ್ ಪಾಣಿಲ, ಪಂಚಾಯಿತಿ ಸದಸ್ಯ ನವೀನ್ ಪೂಜಾರಿ ಕಿಟ್ಟುಬೆಟ್ಟು ಉಪಸ್ಥಿತರಿದ್ದರು. ಮುಖ್ಯಶಿಕ್ಷಕಿ ಜೆಸಿಂತಾ ಫರ್ನಾಂಡಿಸ್ ಸ್ವಾಗತಿಸಿದರು. ಶಿಕ್ಷಕಿ ಉಷಾ ಕಾರ್ಯಕ್ರಮ ನಿರೂಪಿಸಿದರು. ಶ್ಯಾಮಲಾ ವಂದಿಸಿದರು.