

ಮಂಡ್ಯ: ಸರ್ಕಾರಿ ಶಾಲೆಗಳನ್ನು ಬಲವರ್ಧನೆಗೊಳ್ಳುವುದರ ಜತೆಗೆ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ ಎಂದು ಶಾಸಕ ರವಿಕುಮಾರ್ ಗಣಿಗ ಹೇಳಿದರು.
ತಾಲೂಕಿನ ಬಸರಾಳು ಹೋಬಳಿ ಜಿ.ಹೊಸಹಳ್ಳಿಕೊಪ್ಪಲು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ಶಾಲೆ ಕೊಠಡಿಗಳ ಉದ್ಘಾಟಿಸಿ ಮಾತನಾಡಿದ ಅವರು, ಸರ್ಕಾರಿ ಶಾಲೆಯಲ್ಲಿಯೂ ಹಲವು ಸೌಲಭ್ಯ ನೀಡಲಾಗುತ್ತಿದೆ. ಮಾತ್ರವಲ್ಲದೆ ಸರ್ಕಾರಿಂದಲೂ ಹಲವು ಮಹತ್ವದ ಯೋಜನೆ ಜಾರಿಗೊಳಿಸಲಾಗುತ್ತಿದೆ. ಇದನ್ನು ಮಕ್ಕಳು ಸದುಪಯೋಗಪಡಿಸಿಕೊಳ್ಳಬೇಕು. ಜಿ.ಹೊಸಹಳ್ಳಿಕೊಪ್ಪಲಿನಲ್ಲಿ ಶಾಲಾ ಕಟ್ಟಡದ ಕೊಠಡಿ ಉದ್ಘಾಟಿಸಲಾಗಿದೆ. ಮುಂದಿನ ದಿನದಲ್ಲಿ ಇನ್ನಷ್ಟು ಅಭಿವೃದ್ಧಿ ಕೆಲಸ ಮಾಡಲಾಗುವುದು ಎಂದು ಭರವಸೆ ನೀಡಿದರು.
ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಶಂಭೂಗೌಡ, ಮಂಡ್ಯ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಸಿ.ತ್ಯಾಗರಾಜು, ಮುಖಂಡರಾದ ಕಂಬದಹಳ್ಳಿ ಪುಟ್ಟಸ್ವಾಮಿ, ಚಿಕ್ಕಬಳ್ಳಿ ಕೃಷ್ಣ, ಗ್ರಾಮ ಪಂಚಾಯತಿ ಅಧ್ಯಕ್ಷೆ ಇಂದ್ರಮ್ಮ, ಕ್ಷೇತ್ರ ಶಿಕ್ಷಣಾಧಿಕಾರಿ ಸೌಭಾಗ್ಯ, ಪಿಡಿಒ ಅಶ್ವಿನಿ, ಎಸ್‌ಡಿಎಂಸಿ ಅಧ್ಯಕ್ಷ ರಾಮಕೃಷ್ಣ, ಸದಸ್ಯ ಶಿವಲಿಂಗಯ್ಯ, ಇಂಜಿನಿಯರ್ ವಿಜಯಕುಮಾರ್ ಇದ್ದರು.