ಕುಕನೂರು ಗ್ರಾಮದಲ್ಲಿ ಸಿಎಸ್ಸಾರ್ ಅನುದಾನದಡಿ ಶಾಲಾ ಕೊಠಡಿಗಳ ಉದ್ಘಾಟನೆ

RAICHUR
RAICHUR
Published on

ರಾಯಚೂರು ಸರ್ಕಾರಿ ಜÁಗಗಳನ್ನು ಅಭಿವೃದ್ಧಿ ಕೆಲಸಗಳಿಗೆ ಬಳಸಿಕೊಳ್ಳಬೇಕು ಎಂಬುದು ನಮ್ಮ ಮುಖ್ಯ ಉದ್ದೇಶವಾಗಿದೆಂದು ಗ್ರಾಮೀಣ ಕ್ಷೇತ್ರದ ಶಾಸಕ ಬಸನಗೌಡ ದದ್ದಲ್ ತಿಳಿಸಿದರು.

ತಾಲೂಕಿನ ಕುಕನೂರು ಗ್ರಾಮದಲ್ಲಿ ಮಂಗಳವಾರ ೧.೫ ಕೋಟಿ ರೂ. ಸಿಎಸ್ಸಾರ್ ಅನುದಾನದಡಿ ನಿರ್ಮಿಸಿದ ಆರು ಶಾಲಾ ಕೊಠಡಿ, ಭೋಜನಾಲಯ, ಗ್ರಂಥಾಲಯವನ್ನು ಉದ್ಘಾಟಿಸಿ ಮಾತನಾಡಿದರು.

ಶಾಲೆಗಾಗಿ ಈ ಹಿಂದೆಯೇ ಗ್ರಾಮದಲ್ಲಿ ನಾಲ್ಕು ಎಕರೆ ಸರ್ಕಾರಿ ಭೂಮಿಯನ್ನು ಮೀಸಲಿಡಲಾಗಿತ್ತು. ಇಂದು ಈ ಸುಸಜ್ಜಿತ ಶಾಲಾ ಕಟ್ಟಡ, ಗ್ರಂಥಾಲಯ ಹಾಗೂ ಭೋಜನಾಲಯ ಆರಂಭಿಸಲಾಗಿದೆ. ಗ್ರಂಥಾಲಯ ನಿರ್ಮಿಸಿದ್ದು, ಮಕ್ಕಳ ಬೆಳವಣಿಗೆಗೆ ಪೂರಕವಾಗಲಿದೆ.

ಅಲ್ಲಿ ಎಲ್ಲ ರೀತಿಯ ಪುಸ್ತಕಗಳನ್ನು ಸಂಗ್ರಹಿಸಬೇಕು. ಇದರಿಂದ ಸ್ಪರ್ಧಾತ್ಮಕ ತಯಾರಿ ಮಾಡಿಕೊಳ್ಳಲು ಅನುಕೂಲವಾಗಲಿದೆ ಎಂದು ತಿಳಿಸಿದರು.

ಚಿಕ್ಕಸೂಗೂರು ಗ್ರಾಪಂ ಅಧ್ಯಕ್ಷೆ ಮಮತಾ ಅಂಬಯ್ಯ ಮಾತನಾಡಿ, ನಮ್ಮ ಪಂಚಾಯಿತಿ ವ್ಯಾಪ್ತಿಯಲ್ಲಿ ಶಾಸಕರು ಸಾಕಷ್ಟು ಶಾಲಾ ಕೊಠಡಿಗಳನ್ನು ನಿರ್ಮಿಸಿಕೊಟ್ಟಿರುವುದು ಖುಷಿಯ ವಿಚಾರ. ಸದೃಢ ಸಮಾಜಕ್ಕೆ ಶಿಕ್ಷಣ ಬಹಳ ಮುಖ್ಯ. ಮಕ್ಕಳು ಭವಿಷÀ್ಯ ರೂಪಿಸಿಕೊಳ್ಳಬೇಕು. ಚನ್ನಾಗಿ ಓದಿ ಮುಂದೆ ಬರಬೇಕು. ಪಂಚಾಯಿತಿಯಿAದ ಶಾಲಾವರಣದಲ್ಲಿ ಹಸಿರೀಕರಣಕ್ಕೆ ಒತ್ತು ನೀಡಲಾಗುವುದು ಎಂದರು.

ನಂತರ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಶಾಸಕ ಬಸನಗೌಡ ದದ್ದಲ್ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಭೂಮಿ ಪೂಜೆ ನೆರವೇರಿಸಿದರು. ಕುಕನೂರು ಗ್ರಾಮದಲ್ಲಿ ಆಂಜನೇಯ ಸ್ವಾಮಿ ದೇವಸ್ಥಾನದ ಗೋಪುರ ನಿರ್ಮಾಣ ಕಾರ್ಯಕ್ಕೆ ಶಂಕುಸ್ಥಾಪನೆ ನೆರವೇರಿಸಿದರು.

ಚಿಕ್ಕಸೂಗುರು ಗ್ರಾಮದಲ್ಲಿ ಶುದ್ಧಕುಡಿಯುವ ನೀರಿನ ಘಟಕ ಹಾಗೂ ಗ್ರಂಥಾಲಯ ಕಟ್ಟಡ ಉದ್ಘಾಟನೆ ಮಾಡಿದರು.

ಈ ಸಂದರ್ಭದಲ್ಲಿ ತಾಪಂ ಇಒ ಚಂದ್ರಶೇಖರ ಪವಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಪಂಪಾಪತಿ, ಗ್ಯಾರೆಂಟಿ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಡಾ.ಪವನ್ ಪಾಟೀಲ್, ತಾಯಣ್ಣ ನಾಯಕ, ಬಸವರಾಜ ವಕೀಲ, ಗ್ರಾಪಂ ಉಪಾಧ್ಯಕ್ಷೆ ರಾಧಮ್ಮ ಹನುಮಯ್ಯ, ಪಿಡಿಒ ಸರೋಜÁ, ಶಾಲೆ ಮುಖ್ಯಶಿಕ್ಷಕಿ ಬಸಮ್ಮ, ಎಸ್‌ಡಿಎಂಸಿ ಅಧ್ಯಕ್ಷ ಧನಂಜಯ ಸೇರಿ ಅನೇಕರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net