

ವಿಜಯವಾಣಿ ಸುದ್ದಿಜಾಲ ಉಡುಪಿ
ಸ್ವಾತಂತ್ರ್ಯ ಲಭಿಸಿದ ಹಿನ್ನೆಲೆಯಲ್ಲಿ ಬ್ರಿಟಿಷರ ಧ್ವಜ ಇಳಿಸಿ ಭಾರತದ ತ್ರಿವರ್ಣ ಧ್ವಜ ಏರಿಸಿದ್ದರಿಂದ ಆಗಸ್ಟ್ 15ರಂದು ಧ್ವಜಾರೋಹಣ ಮಾಡುತ್ತೇವೆ. ಸ್ವಾತಂತ್ರ್ಯದ ಬಳಿಕ 2 ವರ್ಷ 11 ತಿಂಗಳು 18 ದಿನದಲ್ಲಿ ರಚನೆಯಾದ ಸಂವಿಧಾನ ಅಂಗೀಕರಿಸಿ, ರಾಜತಂತ್ರದಿಂದ ಗಣತಂತ್ರ ವ್ಯವಸ್ಥೆಗೆ ಬದಲಾಗಿದ್ದರ ಪ್ರತಿಕವಾಗಿ ಜನವರಿ 26ರಂದು ಧ್ವಜ ಅನಾವರಣಗೊಳಿಸಿ ಗಣರಾಜ್ಯೋತ್ಸವ ಆಚರಿಸುತ್ತೇವೆ. ಹೀಗಾಗಿ ಮಕ್ಕಳು ಧ್ಜಜ ಆರೋಹಣ ಹಾಗೂ ಅನಾವರಣದ ಮಾಹಿತಿಯನ್ನೂ ಅರಿತುಕೊಳ್ಳಬೇಕು ಎಂದು ವಕೀಲ ಶ್ರೀನಿಧಿ ಹೆಗ್ಡೆ ತಿಳಿಸಿದರು.
ಶಾಲಾ ಸಂಚಾಲಕ ಕೆ. ಅಣ್ಣಪ್ಪ ಶೆಣೈ ಅಧ್ಯಕ್ಷತೆ ವಹಿಸಿದ್ದರು.
ಶಾಲಾ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ವಿದ್ಯಾರ್ಥಿನಿ ದಿಶಾ ಸಾಲ್ವಂಕರ್ ಸ್ವಾಗತಿಸಿದರು. ಅಭಿರಾಮ್ ಪಲಿಮಾರು ವಂದಿಸಿದರು. ಲಿಖಿತಾ ಕಿದಿಯೂರು ಕಾರ್ಯಕ್ರಮ ನಿರೂಪಿಸಿದರು.