ಶ್ರೀ ತಿಬ್ಬಾದೇವಿ ದೇವಸ್ಥಾನ ಉದ್ಘಾಟನೆ

oppo_2
ಮದ್ದೂರು ತಾಲೂಕಿನ ಆತಗೂರು ಹೋಬಳಿ ಮಾಚಹಳ್ಳಿ ಗ್ರಾಮದಲ್ಲಿ ಜೀರ್ಣೋದ್ಧಾರವಾಗಿರುವ ಶ್ರೀ ತಿಬ್ಬಾದೇವಿ ದೇವಸ್ಥಾನ ಬಳಿ ಅಂತಿಮ ಸಿದ್ಧತಾ ಕಾರ್ಯವನ್ನು ಟ್ರಸ್ಟ್‌ನ ಪದಾಧಿಕಾರಿಗಳು ಪರಿಶೀಲನೆ ನಡೆಸಿದರು. ಟಿ.ಎಂ.ಶ್ರೀನಿವಾಸ್, ರಾಮಣ್ಣ, ಟಿ.ಶ್ರೀನಿವಾಸ್, ಚನ್ನೇಗೌಡ, ಬಲರಾಮ, ಪ್ರಕಾಶ್, ಮರಿಗೌಡ ಇದ್ದರು.
Published on

ಮದ್ದೂರು: ತಾಲೂಕಿನ ಆತಗೂರು ಹೋಬಳಿ ಮಾಚಹಳ್ಳಿ ಗ್ರಾಮದಲ್ಲಿ ಜೀರ್ಣೋದ್ಧಾರವಾಗಿರುವ ಶ್ರೀ ತಿಬ್ಬಾದೇವಿ ದೇವಸ್ಥಾನ ಫೆ.4ರಂದು ಉದ್ಘಾಟನೆಯಾಗಲಿದೆ ಎಂದು ದೇವಸ್ಥಾನ ಅಭಿವೃದ್ಧಿ ಸಮಿತಿ ಟ್ರಸ್ಟ್ ಅಧ್ಯಕ್ಷ ಟಿ.ಎಂ.ಶ್ರೀನಿವಾಸ್ ಹೇಳಿದರು.

ದೇವಸ್ಥಾನದ ಬಳಿ ಅಂತಿಮ ಸಿದ್ಧತಾ ಕಾರ್ಯವನ್ನು ಭಾನುವಾರ ಟ್ರಸ್ಟ್‌ನ ಪದಾಧಿಕಾರಿಗಳು ಪರಿಶೀಲನೆ ನಡೆಸಿ ಮಾತನಾಡಿದರು.

ಹಿಂದೆ ಮೂಗೂರಿನಿಂದ ಅಮ್ಮನವರು ಮಾಚಹಳ್ಳಿ ಗ್ರಾಮಕ್ಕೆ ಬಂದು ನೆಲೆಸಿದರು ಎಂಬ ಹಿನ್ನೆಲೆಯಿದ್ದು, ಶಿಥಿಲಗೊಂಡಿದ್ದ ದೇವಸ್ಥಾನವನ್ನು ದಾನಿಗಳು, ಗ್ರಾಮಸ್ಥರ ನೆರವಿನಿಂದ ನೂತನವಾಗಿ ಮರುನಿರ್ಮಾಣ ಮಾಡಲಾಗಿದೆ ಎಂದರು.

ಪ್ರತಿಷ್ಠಾಪನಾ ಕಾರ್ಯಕ್ರಮದ ಅಂಗವಾಗಿ ಫೆ.3ರಂದು ಗಣಪತಿ ಪೂಜೆ ಸೇರಿದಂತೆ ಹಲವು ಕಾರ್ಯಕ್ರಮಗಳು ನಡೆಯಲಿದ್ದು, ಫೆ.4ರಂದು ಬೆಳಗ್ಗೆ ಗೋಪೂಜೆ, ಮಹಾ ಚಂಡಿಕಾ ಯಾಗ, ಮಹಾ ಕುಂಬಾಭಿಷೇಕ, ಮಹಾ ಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗ ಕಾರ್ಯಕ್ರಮಗಳು ಜರುಗಲಿವೆ. ಮಧ್ಯಾಹ್ನ 1ಕ್ಕೆ ಅನ್ನಸಂತರ್ಪಣೆ ಮಾಡಲಾಗುವುದು ಎಂದು ತಿಳಿಸಿದರು.

ಶ್ರೀಕ್ಷೇತ್ರ ಧರ್ಮಸ್ಥಳದ ಶ್ರೀ ವೀರೇಂದ್ರ ಹೆಗ್ಗಡೆ ಹಾಗೂ ಕೆಂಗೇರಿ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಅವರು ದಿವ್ಯ ಸಾನ್ನಿಧ್ಯ ವಹಿಸಲಿದ್ದು, ಶಾಸಕ ಕೆ.ಎಂ.ಉದಯ್, ಮಾಜಿ ಶಾಸಕ ಡಿ.ಸಿ.ತಮ್ಮಣ್ಣ, ಬಿಜೆಪಿ ಮುಖಂಡರಾದ ಎಸ್.ಪಿ.ಸ್ವಾಮಿ ಇತರರು ಆಗಮಿಸಲಿದ್ದಾರೆ ಎಂದರು.

ದೇವಸ್ಥಾನ ಅಭಿವೃದ್ಧಿ ಟ್ರಸ್ಟ್ ನ ಕಾರ್ಯದರ್ಶಿ ರಾಮಣ್ಣ, ಸಹ ಕಾರ್ಯದರ್ಶಿ ಟಿ.ಶ್ರೀನಿವಾಸ್, ಗೌರವಾಧ್ಯಕ್ಷ ಚನ್ನೇಗೌಡ, ಟ್ರಸ್ಟಿಗಳಾದ ಬಲರಾಮ, ಪ್ರಕಾಶ್, ಮರೀಗೌಡ, ನಾಗಣ್ಣ, ದಾಸೆಗೌಡ, ಗ್ರಾಪಂ ಅಧ್ಯಕ್ಷ ಗೋವಿಂದಯ್ಯ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net