

ಮದ್ದೂರು: ತಾಲೂಕಿನ ಹೆಮ್ಮನಹಳ್ಳಿಯಲ್ಲಿ ಜೀರ್ಣೋದ್ಧಾರವಾಗಿರುವ ಶ್ರೀ ಅರ್ಕೇಶ್ವರ ದೇವಸ್ಥಾನದ ಉದ್ಘಾಟನಾ ಕಾರ್ಯಕ್ರಮ ಫೆ.7ರಂದು ಆಯೋಜಿಸಲಾಗಿದೆ ಎಂದು ದೇವಸ್ಥಾನದ ಜೀರ್ಣೋದ್ದಾರ ಸಮಿತಿ ಸದಸ್ಯ ಎಚ್.ಕೆ.ರಾಜಕುಮಾರ್ ಹೇಳಿದರು.
ಫೆ.6ರಂದು ಬೆಳಗ್ಗೆ 10.30ಕ್ಕೆ ಗಂಗೆಪೂಜೆ, ಗಣಪತಿ ಪೂಜೆ ಮಹಾಸಂಕಲ್ಪ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮ, ಫೆ.7ರಂದು ಬೆಳಗ್ಗೆ ಗಣಪತಿ ಹೋಮ, ನವಗ್ರಹ ಹೋಮ, ಮಹಾಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗ ಅನ್ನಸಂತರ್ಪಣೆ ಕಾರ್ಯಕ್ರಮ, ಮಧ್ಯಾಹ್ನ 12.15ರಿಂದ ಕುಂಭಾಭಿಷೇಕ ಜರುಗಲಿದೆ ಎಂದು ಸುದ್ದಿಗಾರರಿಗೆ ತಿಳಿಸಿದರು.
ಕೆಂಗೇರಿಯ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ದಿವ್ಯ ಸಾನ್ನಿಧ್ಯವಹಿಸಲಿದ್ದಾರೆ ಎಂದಿದ್ದಾರೆ.
ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಸದಸ್ಯರಾದ ಎಚ್.ಕೆ.ರಾಜಕುಮಾರ್, ಉಮೇಶ್, ನಾಗೇಶ್, ಮಧುಸೂದನ್, ಜಯಶಂಕರ್, ಅಶೋಕ್, ಶ್ಯಾಮ್ ಪ್ರಸಾದ್, ಯೋಗೇಶ್ ಇದ್ದರು.