ಸಿದ್ದರಾಮೇಶ್ವರ, ಮಾಲರಸಮ್ಮನ ದೇವಸ್ಥಾನದ ಕಮಾನು ಉದ್ಘಾಟನೆ

22-GPT-3
Published on

ಗುಂಡ್ಲುಪೇಟೆ: ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಸಿದ್ದರಾಮೇಶ್ವರ ಮತ್ತು ಮಾಲರಸಮ್ಮನ ದೇವಸ್ಥಾನದ ಮುಂಭಾಗ ನಿರ್ಮಿಸಿರುವ ಕಮಾನನ್ನು ಶುಕ್ರವಾರ ಉದ್ಘಾಟಿಸಲಾಯಿತು.


ಇದರ ಅಂಗವಾಗಿ ಕಳೆದ ಎರಡು ದಿನಗಳಿಂದ ವಿವಿಧ ಹೋಮ- ಹವನ, ಪೂಜಾ ಕೈಂಕರ್ಯಗಳನ್ನು ಹಮ್ಮಿಕೊಳ್ಳಲಾಗಿತ್ತು.
ದೇವಾಲಯವನ್ನು ವಿದ್ಯುತ್ ದೀಪ, ತಳಿರು ತೋರಣಗಳಿಂದ ಸಿಂಗರಿಸಲಾಗಿತ್ತು. ಶುಕ್ರವಾರ ದೇವರ ಮೂರ್ತಿಗಳನ್ನು ವಿವಿಧ ಹೂಗಳಿಂದ ಅಲಂಕರಿಸಿ ವಿಶೇಷ ಪೂಜೆಗಳನ್ನು ಸಲ್ಲಿಸಲಾಯಿತು.


ನಂತರ ಮಧ್ಯಾಹ್ನದ ವೇಳೆಗೆ ಮಂಗಳ ವಾದ್ಯಗಳು, ವೀರಗಾಸೆ, ನಂದಿಧ್ವಜ ಕಂಸಾಳೆ, ಛತ್ರಿ, ಚಾಮರ, ಸತ್ತಿಗೆ, ಸುರಪಾನಿ ಬಿರುದುಗಳ ಸಮೇತ ಪ್ರಮುಖ ಬೀದಿಗಳಲ್ಲಿ ಉತ್ಸವ ಮೂರ್ತಿಗಳನ್ನು ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು.


ಅಕ್ಕಪಕ್ಕದ ಗ್ರಾಮದ ಜನರು ಆಗಮಿಸಿ ದೇವರ ದರ್ಶನ ಪಡೆದು ಪೂಜೆ ಸಲ್ಲಿಸಿದರು. ಶನಿವಾರ ಮಧ್ಯಾಹ್ನ ದೇವಸ್ಥಾನದ ಬಳಿ ಅನ್ನ ಸಂತರ್ಪಣೆ ಏರ್ಪಡಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net