ಪತ್ರಕರ್ತರಿಗೂ ಪ್ರಥಮ ಚಿಕಿತ್ಸೆಯ ಅರಿವು ಅಗತ್ಯ...

Gaandhi Lead
Published on

ಗಾಂಧಿ ಆಸ್ಪತ್ರೆಯ ಎಂ.ಹರಿಶ್ಚಂದ್ರ ಅಭಿಪ್ರಾಯ

ಮಾರ್ಗಸೂಚಿ ಫಲಕ ಅನಾವರಣ

ವಿಜಯವಾಣಿ ಸುದ್ದಿಜಾಲ ಉಡುಪಿ

ತಮ್ಮ ಆರೋಗ್ಯವನ್ನೂ ಲೆಕ್ಕಿಸದೆ ಸಮಾಜದಲ್ಲಿ ಪ್ರತಿಯೊಂದು ಸಂದರ್ಭದಲ್ಲೂ ಮುಂಚೂಣಿಯಲ್ಲಿದ್ದು ಕಾರ್ಯ ನಿರ್ವಹಿಸುತ್ತಾರೆ. ಕಾಲಕಾಲಕ್ಕೆ ಅವರು ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವುದು ಅತಿ ಅಗತ್ಯವಾಗಿದೆ. ಪ್ರಥಮ ಚಿಕಿತ್ಸೆಯ ಕುರಿತಾಗಿಯೂ ಅರಿವು ಇರಬೇಕಾಗಿದ್ದು ತರಬೇತಿ ನೀಡಬೇಕಿದೆ. ಆ ನಿಟ್ಟಿನಲ್ಲಿ ನಮ್ಮ ಸಂಸ್ಥೆಯಿಂದ ಸಹಕಾರ ನೀಡಲಾಗುವುದು ಎಂದು ಉಡುಪಿ ಗಾಂಧಿ ಆಸ್ಪತ್ರೆಯ ಆಡಳಿತ ನಿರ್ದೇಶಕ ಎಂ.ಹರಿಶ್ಚಂದ್ರ ಭರವಸೆ ನೀಡಿದರು.

Gaandhi 2
ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಉಡುಪಿ ಪಂಚಮಿ ಟ್ರಸ್ಟ್​ ಹಾಗೂ ಗಾಂಧಿ ಆಸ್ಪತ್ರೆಯ ಪ್ರಾಯೋಜಕತ್ವದಲ್ಲಿ ಬ್ರಹ್ಮಗಿರಿಯ ನಾಯರ್​ಕೆರೆ ಸಮೀಪದಲ್ಲಿ ಸ್ಥಾಪಿಸಲಾದ ವಿವಿಧ ಮಾರ್ಗಕ್ಕೆ ತೆರಳುವ ಸೂಚನಾ ಫಲಕವನ್ನು ಮೇ 15ರಂದು ಬೆಳಗ್ಗೆ ಅನಾವರಣಗೊಳಿಸಿ, ಬಳಿಕ ಪ್ರೆಸ್​ಕ್ಲಬ್​ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದರು.
Gaandhi 3
ಗಾಂಧಿ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ.ವ್ಯಾಸರಾಜ ತಂತ್ರಿ ಮಾತನಾಡಿದರು. ಉಡುಪಿ ಕರಾವಳಿ ಐಎಂಎ ಅಧ್ಯಕ್ಷ ಡಾ.ಸುರೇಶ ಶೆಣೈ, ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ ಶೆಟ್ಟಿ ಅಲೆವೂರು, ಉಡುಪಿ ತಾಲೂಕು ಆರೋಗ್ಯಾಧಿಕಾರಿ ಡಾ.ವಾಸುದೇವ ಉಪಾಧ್ಯ ಉಪಸ್ಥಿತರಿದ್ದರು.

ಪತ್ರಕರ್ತ ಜನಾರ್ದನ ಕೊಡವೂರು ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್​ ಪೊಲ್ಯ ವಂದಿಸಿದರು.

ಫಲಕದಲ್ಲಿ ಉಡುಪಿ ಜಿಲ್ಲಾ ಪತ್ರಕರ್ತರ ಸಂಘದ ಮುಖ್ಯ ಕಚೇರಿ, ಉಡುಪಿ ಪತ್ರಿಕಾ ಭವನ, ಐಎಂಎ ಭವನ, ಉಡುಪಿ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿಗೆ ಹೋಗುವ ಮಾರ್ಗ ಸೂಚಿಸಲಾಗಿದೆ.

ಸೈನಿಕರ ಕಲ್ಯಾಣ ನಿಧಿಗೆ ನೆರವು

Gaandhi Box
ಇದೇ ಸಂದರ್ಭದಲ್ಲಿ ಗಾಂಧಿ ಆಸ್ಪತ್ರೆಯ ವತಿಯಿಂದ ಭಾರತೀಯ ಸೈನಿಕರ ಕಲ್ಯಾಣ ನಿಧಿಗೆ ನೀಡಲಾದ 55,555ರೂ. ದೇಣಿಗೆಯ ಚೆಕ್​ಅನ್ನು ಉಡುಪಿ ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ ಮೂಲಕ ಆಸ್ಪತ್ರೆಯ ನಿರ್ದೇಶಕ ಎಂ.ಹರಿಶ್ಚಂದ್ರ ಅವರು ಉಡುಪಿ ಜಿಲ್ಲಾಡಳಿತಕ್ಕೆ ಹಸ್ತಾಂತರಿಸಿದರು. ಡಾ.ವ್ಯಾಸರಾಜ ತಂತ್ರಿ, ಡಾ.ಸುರೇಶ ಶೆಣೈ, ರಾಜೇಶ ಶೆಟ್ಟಿ ಅಲೆವೂರು, ಡಾ.ವಾಸುದೇವ ಉಪಾಧ್ಯ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net