28ರಂದು ವಾಮಪದವು ಶಾಖೆ ಉದ್ಘಾಟನೆ : ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ 24ನೇ ಬ್ರಾಂಚ್

Published on

ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ಧೇಶ ಸಹಕಾರ ಸಂಘದ 24ನೇ ನೂತನ ವಾಮದಪದವು ಶಾಖೆ ವಾಮಪದವು ಕಾಲೇಜು ರಸ್ತೆಯ ಕಳಸಡ್ಕ ಕಾಂಪ್ಲೆಕ್ಸ್‌ನ ಒಂದನೇ ಮಹಡಿಯಲ್ಲಿ ನ.28ರಂದು ಉದ್ಘಾಟನೆಗೊಳ್ಳಲಿದೆ.

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷ ಎನ್.ಪದ್ಮನಾಭ ಮಾಣಿಂಜ ಅಧ್ಯಕ್ಷತೆ ವಹಿಸಲಿದ್ದು, ಶಾಸಕ ರಾಜೇಶ್ ನಾಕ್ ಕಚೇರಿ ಉದ್ಘಾಟಿಸಲಿದ್ದಾರೆ. ಮಾಜಿ ಸಚಿವ ಬಿ.ರಮಾನಾಥ ರೈ ಬೆಳ್ಳಿಪಾಡಿ ಸಭಾ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಬಂಟ್ವಾಳ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಸಂಜೀವ ಪೂಜಾರಿ ಗುರುಕೃಪಾ ಭದ್ರತಾ ಕೋಶ, ಚೆನ್ನೈತ್ತೋಡಿ ಗ್ರಾ.ಪಂ ಅಧ್ಯಕ್ಷೆ ವನಿತಾ ಗಣಕಯಂತ್ರ ಉದ್ಘಾಟಿಸಲಿದ್ದಾರೆ. ಆಲದಪದವು-ವಾಮದಪದವು ಬ್ರಹ್ಮಶ್ರೀ ನಾರಾಯಣಗುರು ಸಂಘದ ಅಧ್ಯಕ್ಷ ಚೇತನ್ ಕುಮಾರ್ ಕುದ್ಕಂದೋಡಿ ನಿರಖು ಠೇವಣಿ ಸರ್ಟಿಫಿಕೇಟ್ ವಿತರಿಸಲಿದ್ದಾರೆ. ವಾಮದಪದವು ಬಂಟರ ಸಂಘದ ಅಧ್ಯಕ್ಷ ವಸಂತ ಶೆಟ್ಟಿ ಕೇದಗೆ ಉಳಿತಾಯ ಖಾತೆ ಪುಸ್ತಕ ವಿತರಿಸಲಿದ್ದಾರೆ.

ಪಿಲಾತಬೆಟ್ಟು ವ್ಯ.ಸೇ.ಸ.ಸಂಘ ಪುಂಜಾಲಕಟ್ಟೆ ಅಧ್ಯಕ್ಷ ಎಂ.ತುಂಗಪ್ಪ ಬಂಗೇರ, ವಾಮದಪದವು ಪ್ರಾ.ಕೃ.ಪ.ಸ.ಸಂ ಅಧ್ಯಕ್ಷ ಕಮಲ್ ಶೆಟ್ಟಿ ಬೊಳ್ಳಾಜೆ, ಬಂಟ್ವಾಳ ಕೆಥೋಲಿಕ್ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ ಅಧ್ಯಕ್ಷ ಜೀವನ್ ಲೋಯ್ಡ ಪಿಂಟೋ, ಆಲದಪದವು-ವಾಮದಪದವು ಬ್ರಹ್ಮಶ್ರೀ ನಾರಾಯಣಗುರು ಮಹಿಳಾ ಸಂಘದ ಅಧ್ಯಕ್ಷೆ ಭಾರತಿ ರಾಜೇಂದ್ರ ಪೂಜಾರಿ, ಕಟ್ಟಡದ ಮಾಲೀಕ ಯೋಗೀಶ್ ಕಳಸಡ್ಕ, ಉದ್ಯಮಿ ಅನಂತ್ ಪೈ, ಇರ್ವತ್ತೂರು ಶಾರದೋತ್ಸವ ಸೇವಾ ಸಮಿತಿ ಅಧ್ಯಕ್ಷ ಡಾ. ರಾಮಕೃಷ್ಣ ಎಸ್, ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ವಿಶೇಷಾಧಿಕಾರಿ ಎಂ.ಮೋನಪ್ಪ ಪೂಜಾರಿ ಕಂಡೆತ್ಯಾರು, ಶಾಖಾ ಪ್ರಧಾನ ವ್ಯವಸ್ಥಾಪಕ ಅಶ್ವತ್ಥ್ ವಿ, ವಾಮದಪದವು ಶಾಖಾ ಪ್ರಧಾನ ಶಾಖಾ ವ್ಯವಸ್ಥಾಪಕ ರೂಪೇಶ್ ಮೊದಲಾದವರು ಗೌರವ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net