ಶ್ರೀ ನಂಜುಂಡೇಶ್ವರ ದೇಗುಲ ಉದ್ಘಾಟನೆ

Published on

ಗುಂಡ್ಲುಪೇಟೆ: ತಾಲೂಕಿನ ಹೆಗ್ಗಡಹಳ್ಳಿ ಗ್ರಾಮದಲ್ಲಿ ಶುಕ್ರವಾರ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಶ್ರೀ ನಂಜುಂಡೇಶ್ವರ ದೇವಾಲಯ ಲೋಕಾರ್ಪಣೆ ಕಾರ್ಯಕ್ರಮ ವಿಜೃಂಭಣೆಯಿಂದ ನೆರವೇರಿತು.

ಈ ಹಿನ್ನೆಲೆಯಲ್ಲಿ ದೇವಾಲಯ ಹಾಗೂ ಪ್ರಮುಖ ಬೀದಿಗಳಲ್ಲಿ ತಳಿರು ತೋರಣ ಹಾಗೂ ವಿದ್ಯುತ್ ದೀಪಗಳಿಂದ ಅಲಂಕಾರ ಮಾಡಲಾಗಿತ್ತು. ಗರ್ಭಗುಡಿಯಲ್ಲಿರುವ ಶಿವಲಿಂಗಕ್ಕೆ ಹಳದಿ ಚಂದನ ಲೇಪಿಸಿ ವಿವಿಧ ಹೂವುಗಳಿಂದ ಅಲಂಕಾರ ಮಾಡಲಾಗಿತ್ತು.

ದೇವಾಲಯದ ಉದ್ಘಾಟನೆ ಹಿನ್ನೆಲೆಯಲ್ಲಿ ಸಹಸ್ರಾರು ಭಕ್ತರು ಸರದಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದರು. ಭಕ್ತರಿಗಾಗಿ ಅನ್ನ ಸಂತರ್ಪಣೆ ಮತ್ತು ಸಂಗೀತ ಹಾಗೂ ನಾಟಕ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net