

ಹುಬ್ಬಳ್ಳಿ : ಶ್ರೀ ಗುರು ಸಂಗೀತ ವಿದ್ಯಾಲಯದ ಉದ್ಘಾಟನೆ ಹಾಗೂ ಸಂಗೀತ ಕಾರ್ಯಕ್ರಮವನ್ನು ನಗರದ ಹಳೇ ಕೋರ್ಟ್ ಬಳಿಯ ಮಹಾರಾಷ್ಟ್ರ ಮಂಡಳ ಸಭಾಭವನದಲ್ಲಿ ಫೆ. 2ರಂದು ಸಂಜೆ 5 ಗಂಟೆಗೆ ಹಮ್ಮಿಕೊಳ್ಳಲಾಗಿದೆ.
ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಸಂಗೀತ ವಿದ್ಯಾಲಯದ ಅಧ್ಯಕ್ಷ ಹಾಗೂ ಆಕಾಶವಾಣಿ ಕಲಾವಿದ ಶ್ರೀಕಾಂತ ಬಾಕಳೆ, ಸ್ವರ್ಣ ಗ್ರುಪ್ನ ವ್ಯವಸ್ಥಾಪಕ ನಿರ್ದೇಶಕ ಡಾ. ವಿ.ಎಸ್.ವಿ. ಪ್ರಸಾದ ಉದ್ಘಾಟಿಸುವರು. ಸಮಾಜ ಸೇವಕ ರಮೇಶ ಮಹಾದೇವಪ್ಪನವರ ಅಧ್ಯಕ್ಷತೆ ವಹಿಸುವರು ಎಂದರು.
ಸಂಗೀತ ವಿದ್ಯಾಲಯದ ವಿದ್ಯಾರ್ಥಿಗಳಿಂದ ಸಂಗೀತ ಕಾರ್ಯಕ್ರಮ ಏರ್ಪಡಿಸಲಾಗಿದೆ. ಹಿಂದುಸ್ತಾನಿ ಶಾಸ್ತ್ರೀಯ ಸಂಗೀತ ಗಾಯಕಿ ವಿದುಷಿ ರೇಣುಕಾ ನಾಕೋಡ ಅವರು ಗಾಯನ ಪ್ರಸ್ತುತಪಡಿಸುವರು. ರಾಷ್ಟ್ರಮಟ್ಟದ ತಬಲಾ ವಾದಕ ರಘುನಾಥ ನಾಕೋಡ ಅವರಿಂದ ತಬಲಾ ವಾದನ ನಡೆಯಲಿದೆ ಎಂದು ಹೇಳಿದರು.
ಅರವಿಂದ ವಾಡೋಣಿ, ರಾಜಕುಮಾರ ಕಟ್ಟಿಮನಿ, ಫೀರಾಜಿ ಕೆ. ಅವರು ಸುದ್ದಿಗೋಷ್ಠಿಯಲ್ಲಿ ಇದ್ದರು.