

ಮಡಿಕೇರಿ:
ಜಿಲ್ಲೆಯನ್ನು ಪ್ಲಾಸ್ಟಿಕ್ ಮುಕ್ತವಾಗಿಸಿ ಸ್ವಚ್ಛ ಹಾಗೂ ಸುಂದರ ಪರಿಸರ ನಿರ್ಮಿಸಲು ಎಲ್ಲರೂ ಕೈ ಜೋಡಿಸಬೇಕು ಎಂದು ಕೊಡಗು ಜಿಲ್ಲಾ ಪಂಚಾಯತ್ ಸಿಇಒ ವರ್ಣಿತ್ ನೇಗಿ ಹೇಳಿದರು.ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಹಾಗೂ ಸ್ವಚ್ಛ ಭಾರತ್ ಮಿ?ನ್ ಗ್ರಾಮೀಣ ಯೋಜನೆಯಡಿಯಲ್ಲಿ ಶನಿವಾರ ಕೊಡಗು ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ನಡೆದ ಸ್ವಚ್ಛತಾ ಹೀ ಸೇವಾ ಆಂದೋಲನ ಉದ್ಘಾಟನಾ ಕಾರ್ಯಕ್ರಮದಲ್ಲಿ ಪ್ರತಿಜ್ಞಾ ವಿಧಿ ಸ್ವೀಕರಿಸಿ ಮಾತನಾಡಿದರು.
ಕೊಡಗು ಜಿಲ್ಲೆ ಪ್ರಾಕೃತಿಕ ಸೌಂದರ್ಯಕ್ಕೆ ಹೆಸರಾಗಿದ್ದು, ಇದರ ಸ್ವಚ್ಛತೆಯನ್ನು ಕಾಪಾಡಿಕೊಳ್ಳುವುದು ಪ್ರತಿಯೊಬ್ಬ ನಾಗರಿಕರ ಕರ್ತವ್ಯವಾಗಿದೆ. ಈ ನಿಟ್ಟಿನಲ್ಲಿ ಸರ್ಕಾರ ೧೫ ದಿನಗಳ ಕಾಲ ದೇಶಾದ್ಯಂತ ಸ್ವಚ್ಛತೆ ಕುರಿತು ಸ್ವಚ್ಛತೆಯೇ ಸೇವೆ ಎಂಬ ಹೆಸರಿನಲ್ಲಿ ಸ್ವಚ್ಛತಾ ಆಂದೋಲನ ನಡೆಸುತ್ತಿದೆ.
ಇದರೊಂದಿಗೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ಶಾಲೆ, ಕಾಲೇಜು, ಅಂಗನವಾಡಿ ಸರ್ಕಾರಿ ಕಚೇರಿಗಳಲ್ಲಿ ಶ್ರಮದಾನ ಹಾಗೂ ಇನ್ನಿತರ ಸ್ಪರ್ಧೆಗಳನ್ನು ಸಹ ಆಯೋಜಿಸಲಾಗಿದೆ. ಅಕ್ರಮವಾಗಿ ತ್ಯಾಜ ಸುರಿವ ಸ್ಥಳಗಳನ್ನು ಗುರುತಿಸಿ ಸ್ವಚ್ಛಗೊಳಿಸುವುದು. ಪ್ರವಾಸಿತಾಣಗಳಲ್ಲಿ ಸ್ವಚ್ಛತಾ ಕಾರ್ಯ ಹಾಗೂ ಜಿಲ್ಲೆಯ ಹಾಡಿಗಳಲ್ಲಿ ಜನಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಏಕ ಬಳಕೆಯ ಪ್ಲಾಸ್ಟಿಕ್ ಉತ್ಪನ್ನಗಳನ್ನು ಜಿಲ್ಲೆಯಲ್ಲಿ ನಿ?ೇಧಿಸಿರುವ ಕುರಿತು ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತದೆ. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಹಸಿ-ಒಣ ತ್ಯಾಜ್ಯಗಳ ವಿಂಗಡಣೆ ಕುರಿತು ಜನಜಾಗೃತಿಯನ್ನು ಹಮ್ಮಿಕೊಳ್ಳಲಾಗುತ್ತಿದೆ. ಇದರೊಂದಿಗೆ ರಸ್ತೆ ಬದಿ ಸ್ವಚ್ಛತೆಯ ಕುರಿತು ಜನರಿಗೆ ಅರಿವು ಮೂಡಿಸುವ ಕಾರ್ಯಕ್ರಮಗಳು ನಡೆಯಲಿದೆ ಎಂದರು.
ಜಿಲ್ಲಾ ಪಂಚಾಯತ್ ಸಹಾಯಕ ಕಾರ್ಯದರ್ಶಿ ಜೀವನ್ ಕುಮಾರ್ ಮಾತನಾಡಿ, ಮುಂದಿನ ಪೀಳಿಗೆಗೆ ಉತ್ತಮ ಪರಿಸರ ಉಳಿಸುವ ಉದ್ದೇಶದಿಂದ, ನಮ್ಮೆಲ್ಲರ ಆರೋಗ್ಯದ ಹಿತ ದೃಷ್ಟಿಯಿಂದ, ಒಮ್ಮೆ ಉಪಯೋಗಿಸುವ ಪ್ಲಾಸ್ಟಿಕ್ ಬಳಕೆಯನ್ನು ತ್ಯಜಿಸುತ್ತೇನೆ. ದಿನ ನಿತ್ಯ ಬಳಕೆಯಲ್ಲಿ ಪ್ಲಾಸ್ಟಿಕ್ ಬಳಸದೇ ಪರಿಸರ ಸ್ನೇಹಿ ಕೈಚೀಲ-ವಸ್ತುಗಳನ್ನು ಉಪಯೋಗಿಸುತ್ತೇನೆ ಎಂದು ಪ್ರತಿಜ್ಞಾ ವಿಧಿ ಬೋಧಿಸಿದರು.
ಕುಡಿಯುವ ನೀರು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಸುರೇಶ್ ಕುಮಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್, ಡಿಡಿಪಿಐ ಸೌಮ್ಯ ಪೊನ್ನಪ್ಪ, ಜಿಲ್ಲಾ ಎಚ್‌ಆರ್‌ಡಿ ಸಮಾಲೋಚಕ ಡಿ.ಡಿ. ಪೆಮ್ಮಯ್ಯ, ವಾಸುದೇವು, ಸ್ವಚ್ಛತಾ ಆಂದೋಲನದ ಸಮಾಲೋಚಕ ಸೂರಜ್, ಹರ್ಷಿತಾ ಇತರರು ಇದ್ದರು.