ತಾಲೂಕುಮಟ್ಟದ ಕ್ರೀಡಾಕೂಟಕ್ಕೆ ಚಾಲನೆ

Sul_taluk level
Published on

ಸುಳ್ಯ: ಸುಳ್ಯ ತಾಲೂಕುಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಕ್ರೀಡಾಕೂಟ ಕ್ರೀಡಾವೈಭವ-2024ಕ್ಕೆ ಶುಕ್ರವಾರ ಎಲಿಮಲೆ ಸರ್ಕಾರಿ ಪ್ರೌಢಶಾಲೆ ಮೈದಾನದಲ್ಲಿ ಅದ್ದೂರಿ ಚಾಲನೆ ನೀಡಲಾಯಿತು.

ತಾಲೂಕು ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ ಕೆ. ಉದ್ಘಾಟಿಸಿದರು. ಕ್ರೀಡಾ ವೈಭವ-2024 ಇದರ ಸಂಘಟನಾ ಸಮಿತಿ ಅಧ್ಯಕ್ಷ ವಿಷ್ಣು ಭಟ್ ಮೂಲೆತೋಟ ಅಧ್ಯಕ್ಷತೆ ವಹಿಸಿದ್ದರು.

ಕ್ಷೇತ್ರ ಶಿಕ್ಷಣಾಧಿಕಾರಿ ಶೀತಲ್, ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಚಂದ್ರಶೇಖರ ಪೇರಾಲು, ದೇವಚಳ್ಳ ಶಾಲಾ ಮುಖ್ಯಶಿಕ್ಷಕ ಶ್ರೀಧರ ಗೌಡ, ಜ್ಞಾನದೀಪ ವಿದ್ಯಾಸಂಸ್ಥೆ ಮುಖ್ಯಶಿಕ್ಷಕ ಗದಾಧರ ಬಾಳುಗೋಡು, ಎಸ್‌ಡಿಎಂಸಿ ಅಧ್ಯಕ್ಷ ಧನಂಜಯ ಬಾಳೆತೋಟ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಜೇಶ್ ಅಂಬೆಕಲ್ಲು, ದೈಹಿಕ ಶಿಕ್ಷಣಾ ಪರಿವೀಕ್ಷಣಾಧಿಕಾರಿ ಶ್ರೀಮತಿ ಆಶಾ ನಾಯಕ್, ಶಾಲಾ ದೈಹಿಕ ಶಿಕ್ಷಣ ಶಿಕ್ಷಕಿ ತಿರುಮಲೇಶ್ವರಿ ಎಂ.ಎಸ್., ದೇವಚಳ್ಳ ಸಮೂಹ ಸಂಪನ್ಮೂಲ ವ್ಯಕ್ತಿ ಮಹೇಶ್ ಉಪಸ್ಥಿತರಿದ್ದರು.

ಮುಖ್ಯಶಿಕ್ಷಕಿ ಸಂಧ್ಯಾ ಸ್ವಾಗತಿಸಿದರು. ಶಿಕ್ಷಕ ಮುರಳೀಧರ್ ಪುನುಕುಟ್ಟಿ ಕಾರ್ಯಕ್ರಮ ನಿರೂಪಿಸಿದರು. ಅಪರಾಹ್ನ ಶಾಸಕಿ ಭಾಗೀರಥಿ ಮುರುಳ್ಯ ಕ್ರೀಡಾಂಗಣಕ್ಕೆ ಭೇಟಿ ನೀಡಿ ಸ್ಪರ್ಧೆಗಳಲ್ಲಿ ಗೆದ್ದ ಕ್ರೀಡಾಳುಗಳನ್ನು ಅಭಿನಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net