

ವಿಜಯವಾಣಿ ಸುದ್ದಿಜಾಲ ಧಾರವಾಡ
ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಜಿಲ್ಲಾ ಘಟಕದ ವತಿಯಿಂದ ಆ. 24ರಂದು ನಗರದ ರಂಗಾಯಣ ಸಾಂಸ್ಕೃತಿಕ ಸಮುಚ್ಚಯ ಭವನದಲ್ಲಿ ಬೆಳಗ್ಗೆ 9.30ಕ್ಕೆ ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ತಾಲೂಕು ಘಟಕ ಉದ್ಘಾಟನೆ ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಏರ್ಪಡಿಸಲಾಗಿದೆ ಎಂದು ವೇದಿಕೆ ಜಿಲ್ಲಾ ಘಟಕದ ಅಧ್ಯಕ್ಷ ಎ.ಎ. ದರ್ಗಾ ತಿಳಿಸಿದರು.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಘಟಕದ ಅಧ್ಯಕ್ಷ ಕೊಟ್ರೇಶ ಉಪ್ಪಾರ ಉದ್ಘಾಟಿಸುವರು. ಉಪಾಧ್ಯೆಕ್ಷೆ ಶಾಲಿನಿ ರುದ್ರಮುನಿ, ಸಾಹಿತಿ ಶ್ರೀನಿವಾಸ ವಾಡಪ್ಪಿ, ಆಕಾಶವಾಣಿ ನಿವೃತ್ತ ನಿರ್ದೇಶಕ ಬಸು ಬೇವಿನಗಿಡದ ಅತಿಥಿಗಳಾಗಿ ಆಗಮಿಸಲಿದ್ದಾರೆ ಎಂದರು.
ಸಾಹಿತಿಗಳಾದ ಸಂಧ್ಯಾ ದೀಕ್ಷಿತ, ಬಿ.ಯು. ಬೈರಕದಾರ, ಕವಿತಾ ಸಾರಂಗಮಠ ಅವರಿಗೆ ಬೇಂದ್ರೆ ಕಾವ್ಯ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಮಧ್ಯಾಹ್ನ 2 ಗಂಟೆಗೆ ಭೀಮರಾವ್ ವಾಡಪ್ಪಿ ಅವರ ಸಾಹಿತ್ಯದಲ್ಲಿ ಭಾವೈಕ್ಯತೆ ಕುರಿತು ವಿಕಾಸ ಹೊಸಮನೆ ಉಪನ್ಯಾಸ ನೀಡುವರು. ಬಳಿಕ ಕವಿಗೋಷ್ಠಿ ನಡೆಯಲಿದೆ ಎಂದರು.
ಶಾಲಿನಿ ರುದ್ರಮುನಿ, ಶಿವು ಖನ್ನೂರ, ಪಿ.ಎ.ದರ್ಗಾ, ಎಂ.ಆರ್. ನದಾಫ, ಇತರರು ಇದ್ದರು.