ಸಹಕಾರ ಸಂಘದ ಕಚೇರಿ ಉದ್ಘಾಟನೆ ಇಂದು

chaluvarayaswamy
Published on

ಮದ್ದೂರು: ತಾಲೂಕಿನ ಗೆಜ್ಜಲಗೆರೆ ಗ್ರಾಮದಲ್ಲಿ 80 ಲಕ್ಷ ರೂ.ವೆಚ್ಚದಲ್ಲಿ ನಿರ್ಮಾಣವಾಗಿರುವ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಕಚೇರಿ ಮತ್ತು ಮಳಿಗೆಗಳನ್ನು ಫೆ.29ರಂದು ಬೆಳಗ್ಗೆ 11 ಗಂಟೆಗೆ ಕೃಷಿ ಸಚಿನ ಎನ್.ಚಲುವರಾಯಸ್ವಾಮಿ ಉದ್ಘಾಟಿಸಲಿದ್ದಾರೆ. ಶಾಸಕ ಕೆ.ಎಂ.ಉದಯ್, ಎಂಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೆ.ಸಿ.ಜೋಗಿಗೌಡ, ಗೆಜ್ಜಲಗೆರೆ ಎಂಪಿಆರ್‌ಎಸಿಎಸ್ ಅಧ್ಯಕ್ಷ ಕೆ.ಬಿ.ಕೃಷ್ಣ, ವಿಧಾನ ಪರಿಷತ್ ಸದಸ್ಯರಾದ ಮಧು ಜಿ.ಮಾದೇಗೌಡ, ದಿನೇಶ್ ಗೂಳಿಗೌಡ ಸೇರಿದಂತೆ ಇತರರು ಭಾಗವಹಿಸಲಿದ್ದಾರೆ ಎಂದು ಸಂಘದ ಅಧ್ಯಕ್ಷ ಕೆ.ಬಿ.ಕೃಷ್ಣಪ್ಪ, ಸಿಇಒ ಕೆ.ಡಿ.ರಾಜೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net