

ಬೆಳ್ತಂಗಡಿ: ಪಾಲಕರು ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸುವುದರ ಮೂಲಕ ಶಾಲೆಯನ್ನು ಉಳಿಸಿ ಬೆಳೆಸುವ ಕಾರ್ಯ ಆಗಬೇಕಿದೆ. ಗುಣಮಟ್ಟದ ಶಿಕ್ಷಣ ಸರ್ಕಾರಿ ಶಾಲೆಗಳಲ್ಲಿ ದೊರೆಯುತ್ತಿದ್ದು, ಶಾಲೆಗಳನ್ನು ಉಳಿಸಿಕೊಳ್ಳುವತ್ತ ಊರಿನವರು ಗಮನ ಹರಿಸಬೇಕಾಗಿದೆ ಎಂದು ಶಾಸಕ ಹರೀಶ್ ಪೂಂಜ ಹೇಳಿದರು.
ಬಂದಾರು ಗ್ರಾಮ ಪೆರ್ಲ ಬೈಪಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿವೇಕ ಕೊಠಡಿಯನ್ನು ಸೋಮವಾರ ಉದ್ಘಾಟಿಸಿ ಮಾತನಾಡಿದರು.
ಬಂದಾರು ಗ್ರಾ.ಪಂ. ಅಧ್ಯಕ್ಷ ದಿನೇಶ್ ಗೌಡ ಖಂಡಿಗ, ಸದಸ್ಯರಾದ ಅನಿತಾ ಕೆ.ಕುರುಡಂಗೆ, ಭಾರತಿ ಕೋಡಿಯೆಲ್, ತಾ.ಪಂ. ಮಾಜಿ ಸದಸ್ಯರಾದ ಮಹಾಬಲ ಗೌಡ, ಕೃಷ್ಣಯ್ಯ ಆಚಾರ್ಯ, ಪದ್ಮುಂಜ ಕೃಷಿ ಪತ್ತಿನ ಸಹಕಾರಿ ಸಂದ ಅಧ್ಯಕ್ಷರಾದ ರಕ್ಷಿತ್ ಪಣೆಕ್ಕರ, ಹೊನ್ನಪ್ಪ ಗೌಡ, ಡೀಕಯ್ಯ ಗೌಡ, ಪೆರ್ಲ ಬೈಪಾಡಿ ಹಾಲು ಉತ್ಪಾದಕರ ಸಂದ ಅಧ್ಯಕ್ಷ ಉಮೇಶ್ ಗೌಡ, ಎಸ್‌ಡಿಎಂಸಿ ಅಧ್ಯಕ್ಷ ದಾಮೋದರ ಗೌಡ ಕಾಡಂಡ ಮೊದಲಾದವರಿದ್ದರು.