ವಿಶ್ವಗುರುವಾಗಿ ಬೆಳೆಯುತ್ತಿದೆ ಭಾರತ

11gan2
Published on

ವಿಜಯವಾಣಿ ಸುದ್ದಿಜಾಲ ಕುಂದಾಪುರ ಭಾರತ ಕೃಷಿ ಪ್ರಧಾನ ದೇಶ. ರೈತರು ದುಡಿಯದೆ ಸುಮ್ಮನೆ ಕುಳಿತರೆ ನಮ್ಮ ದೇಶದ ಜನರು ಉಪವಾಸ ಕುಳಿತಕೊಳ್ಳಬೇಕಾದ ಪರಿಸ್ಥಿತಿ ಬರಲಿದೆ. ಕಳೆದ 75 ವರ್ಷಗಳಲ್ಲಿ ವಿಶ್ವಗುರು ಆಗಿ ಭಾರತ ದೇಶ ಬೆಳೆಯುತ್ತಿದೆ ಎಂದು ಉಡುಪಿ ಜಿಲ್ಲಾ ಉಸ್ತುವಾರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಆರ್.ಹೆಬ್ಬಾಳ್ಕರ್ ಹೇಳಿದರು. ರಾಜ್ಯ ಸರ್ಕಾರ, ಉಡುಪಿ ಜಿಪಂ, ಕುಂದಾಪುರ ಕೃಷಿ ಇಲಾಖೆ ವತಿಯಿಂದ ಕೋಟೇಶ್ವರದಲ್ಲಿ ನಿರ್ಮಿಸಲಾಗಿರುವ ಕುಂದಾಪುರ ರೈತ ಸಂಪರ್ಕ ಕೇಂದ್ರ ಉದ್ಘಾಟಿಸಿ, ರೈತರಿಗೆ ಬಿತ್ತನೆ ಬೀಜ, ಫಲಾನುಭವಿಗಳಿಗೆ ವಿವಿಧ ಸವಲತ್ತುಗಳನ್ನು ಭಾನುವಾರ ವಿತರಿಸಿ ಮಾತನಾಡಿದರು. ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಅಧ್ಯಕ್ಷತೆ ವಹಿಸಿದ್ದರು. ಉಡುಪಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ, ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ., ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಕುಂದಾಪುರ ಉಪವಿಭಾಗಾಧಿಕಾರಿ ರಶ್ಮಿ ಎಸ್.ಆರ್., ಕೋಟೇಶ್ವರ ಗ್ರಾಪಂ ಉಪಾಧ್ಯಕ್ಷೆ ಆಶಾ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಅಶೋಕ ಕುಮಾರ್ ಕೊಡವೂರು, ಉಪಾಧ್ಯಕ್ಷ ದಿನೇಶ ಹೆಗ್ಡೆ ಮೊಳಹಳ್ಳಿ, ಕುಂದಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ವಿನೋದ ಕ್ರಾಸ್ಟೋ, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ ಶಾನ್ಮಕ್ಕಿ, ಜಿಲ್ಲಾ ಉಪ ಕೃಷಿ ನಿರ್ದೇಶಕ ಚಂದ್ರಶೇಖರ ನಾಯ್ಕ ಮತ್ತಿತರರು ಉಪಸ್ಥಿತರಿದ್ದರು. ಕುಂದಾಪುರದ ಸಹಾಯಕ ಕೃಷಿ ನಿರ್ದೇಶಕಿ ರೂಪಾ ಜೆ.ಮಾಡ ಸ್ವಾಗತಿಸಿದರು. ಜಿಲ್ಲಾ ಜಂಟಿ ಕೃಷಿ ನಿರ್ದೇಶಕಿ ಪೂರ್ಣಿಮಾ ಜೆ.ಸಿ. ಪ್ರಾಸ್ತಾವಿಕ ಮಾತನಾಡಿದರು. ಸಂತೋಷ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು. ಕೃಷಿ ಅಧಿಕಾರಿ ಗಾಯತ್ರಿದೇವಿ ವಂದಿಸಿದರು.

ಯಾವಾಗ ರೈತರು ಸುಖಿಯಾಗಿ ಇರುತ್ತಾರೋ ಅಂದು ನಮ್ಮ ದೇಶ ಸಮೃದ್ಧಿ ಹೊಂದಲು ಸಾಧ್ಯ. ಅಧಿಕಾರಿಗಳು ರೈತರ ಮಿತ್ರರಾಗಿ ಕೆಲಸ ಮಾಡಬೇಕು. ಕೃಷಿ ಸಖಿಯರ ಮೂಲಕ ಸರ್ಕಾರಕ್ಕೆ ಒಳ್ಳೆಯ ಹೆಸರು ಬರಬೇಕು. ಸರ್ಕಾರದಿಂದ ಬರುವ ಯೋಜನೆಗಳನ್ನು ಕೃಷಿ ಅಧಿಕಾರಿಗಳು, ಜಿಲ್ಲಾಡಳಿತ ರೈತರ ಮನೆ ಬಾಗಿಲಿಗೆ ತೆಗೆದುಕೊಂಡು ಹೋಗಿ ತಿಳಿವಳಿಕೆ ನೀಡುವ ಕೆಲಸ ಮಾಡಬೇಕು. ಪ್ರತಿಯೊಂದು ಗ್ರಾಪಂನಲ್ಲಿ ರೈತರಿಗೆ ಬರುವ ಯೋಜನೆ ಬಗ್ಗೆ ಫಲಕ ಅಳವಡಿಸಬೇಕು. -ಸಚಿವೆ ಲಕ್ಷ್ಮೀ ಆರ್.ಹೆಬ್ಬಾಳ್ಕರ್ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರು ಉಡುಪಿ ಜಿಲ್ಲೆ ಕೃಷಿ ಪ್ರಧಾನ ಎಂದು ಹೇಳಲು ಬೇಜಾರಾಗುತ್ತದೆ. ಇತ್ತೀಚಿನ ದಿನಗಳಲ್ಲಿ ಭತ್ತದ ಕೃಷಿ ಲಾಭದಾಯಕವಾಗಿಲ್ಲ. ಖರ್ಚು ಸರಿದೂಗಿಸಲು ಕಷ್ಟವಾಗುತ್ತದೆ. ಹೀಗಾಗಿ ರೈತರು ಪರ್ಯಾಯವಾಗಿ ಅಡಕೆ, ತೆಂಗು ಬೆಳೆಯಲು ಮುಂದಾಗುತ್ತಿದ್ದಾರೆ. ಈ ನಿಟ್ಟಿನಲ್ಲಿ ಭತ್ತಕ್ಕೆ ಇನ್ನೂ ಹೆಚ್ಚಿನ ಬೆಂಬಲ ದೊರೆತು ಭತ್ತದ ಕೃಷಿಗೆ ಹೆಚ್ಚಿನ ಉತ್ತೇಜನ ನೀಡಬೇಕು. ಹೊಳೆ, ನದಿಗಳಲ್ಲಿನ ಹೂಳು ತೆಗೆಯುವ ಕೆಲಸಕ್ಕೆ ಇನ್ನಷ್ಟು ವೇಗ ನೀಡಬೇಕು. -ಕಿರಣ್ ಕುಮಾರ್ ಕೊಡ್ಗಿ, ಕುಂದಾಪುರ ಶಾಸಕ https://www.vijayavani.net/saving-lives-through-blood-donation

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net