ಉತ್ತಮ ಆರೋಗ್ಯಕ್ಕೆ ಕ್ರೀಡೆ ಅತ್ಯವಶ್ಯ

mkg1
Published on

ಜಗಳೂರು: ವಿದ್ಯಾರ್ಥಿಗಳ ಮಾನಸಿಕ ಹಾಗೂ ದೈಹಿಕ ಆರೋಗ್ಯಕ್ಕೆ ಕ್ರೀಡೆಗಳು ಅವಶ್ಯಕ ಎಂದು ಶಾಸಕ ಚಿಕ್ಕಮ್ಮನಹಟ್ಟಿ ಬಿ. ದೇವೇಂದ್ರಪ್ಪ ಅಭಿಪ್ರಾಯಪಟ್ಟರು.

ಸಾರ್ವಜನಿಕ ಶಿಕ್ಷಣ ಇಲಾಖೆ, ಎಸ್‌ಇಎಸ್ ಮಾಡ್ರನ್ ಶಾಲೆ ಸಹಯೋಗದಲ್ಲಿ ಇಲ್ಲಿನ ಬೇಡರಕಣ್ಣಪ್ಪ ವಸತಿಯುತ ಪ್ರೌಢಶಾಲಾ ಆವರಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಹಿರಿಯ ಪ್ರಾಥಮಿಕ ಶಾಲೆಗಳ ಜಗಳೂರು ಪಟ್ಟಣದ ವಲಯ ಮಟ್ಟದ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು.

ಹಿಂದಿನ ಕಾಲದಲ್ಲಿ ಪ್ರತಿಯೊಬ್ಬರೂ ಉತ್ತಮ ಆಹಾರ ಸೇವಿಸಿ ನೂರಾರು ವಷರ್ಗಳ ಕಾಲ ಜೀವನ ನಡೆಸಿದರು. ಆದರೆ, ಆಧುನಿಕತೆ ಹೆಚ್ಚಾದಂತೆ ಮನುಷ್ಯ ಇಂದು ಹಲವು ರೋಗಗಳಿಗೆ ತುತ್ತಾಗುತ್ತಿದ್ದಾನೆ. ಈ ನಿಟ್ಟಿನಲ್ಲಿ ಉತ್ತಮ ಆರೋಗ್ಯಕ್ಕಾಗಿ ಎಲ್ಲರೂ ಕ್ರೀಡೆಯಲ್ಲಿ ತೊಡಗುವಂತೆ ಅವರು ಮನವಿ ಮಾಡಿದರು.

ಪ್ರಭಾರ ಬಿಇಒ ಸುರೇಶ್‌ರೆಡ್ಡಿ, ಎಸ್‌ಇಎಸ್ ಮಾಡ್ರನ್ ಶಾಲೆ ಕಾರ್ಯದರ್ಶಿ ಮುನಿಯನಾಯ್ಕ, ಎಸ್ಸಿ, ಎಸ್ಟಿ ಜಿಲ್ಲಾ ಜಾಗೃತಿ ಸಮಿತಿ ಸದಸ್ಯ ಪಿ.ಎಸ್. ಅರವಿಂದ್, ಸಮನ್ವಯಾಧಿಕಾರಿ ಡಿ.ಡಿ. ಹಾಲಪ್ಪ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಹನುಮಂತೇಶ್, ವೀರೇಶ್, ಪ್ರಕಾಶ್, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಪಲ್ಲಾಗಟ್ಟೆ ಶೇಖರಪ್ಪ, ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಅಹಮದ್ ಅಲಿ, ಹಿರೇಮಲ್ಲನಹೊಳೆ ಲೋಕೇಶ್ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net