ಸಹಕಾರಿ ಸಂಘದ ನೂತನ ಕಟ್ಟಡ ಉದ್ಘಾಟನೆ

Inauguration of the new building of the cooperative society
ಬಾದಾಮಿ ತಾಲೂಕಿನ ನಂದಿಕೇಶ್ವರ ಗ್ರಾಮದಲ್ಲಿ 1.70 ಕೋ.ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಕಟ್ಟಡ.
Published on

ಬಾದಾಮಿ: ತಾಲೂಕಿನ ನಂದಿಕೇಶ್ವರ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸುವರ್ಣ ಮಹೋತ್ಸವ ಹಾಗೂ ಕಾರ್ಯಾಲದ ನೂತನ ಕಟ್ಟಡ ಹಾಗೂ ಗೋದಾಮಿನ ಉದ್ಘಾಟನಾ ಸಮಾರಂಭವು ಮಾ.3ರಂದು ಬೆಳಿಗ್ಗೆ 10.30ಕ್ಕೆ ಜರುಗಲಿದೆ ಎಂದು ಸಂಘದ ಉಪಾಧ್ಯಕ್ಷ ಮುತ್ತಣ್ಣ ರೋಣದ ಹಾಗೂ ಬಸವರಾಜ ಕಲಾಲ ತಿಳಿಸಿದ್ದಾರೆ.

ಹುಬ್ಬಳ್ಳಿ ಮೂರು ಸಾವಿರ ಮಠದ ಜಗದ್ಗುರು ಗುರುಸಿದ್ಧರಾಜಯೋಗೀಂದ್ರ ಮಹಾಸ್ವಾಮಿಗಳು, ಸದಾಶಿವ ಮಹಾಸ್ವಾಮಿಗಳು, ಕಮತಗಿಯ ಹೊಳೆಹುಚ್ಚೇಶ್ವರ ಮಹಾಸ್ವಾಮಿಗಳು, ಗುಳೇದಗುಡ್ಡದ ಕಾಶಿನಾಥ ಮಹಾಸ್ವಾಮಿಗಳು, ಒಪ್ಪತ್ತೇಶ್ವರ ಮಹಾಸ್ವಾಮಿಗಳು ಸಾನ್ನಿಧ್ಯ ವಹಿಸಲಿದ್ದಾರೆ. ಸಂಘದ ಅಧ್ಯಕ್ಷರು ಹಾಗೂ ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಕುಮಾರಗೌಡ ಜನಾಲಿ ಅಧ್ಯಕ್ಷತೆ ವಹಿಸಲಿದ್ದಾರೆ.

ಸಂಸದ ಪಿ.ಸಿ.ಗದ್ದಿಗೌಡರ ಸಹಕಾರ ಧ್ವಜಾರೋಹಣ ನೆರವೇರಿಸಲಿದ್ದಾರೆ. ಸಂಘದ ವಿವಿಧ ವಿಭಾಗಗಳನ್ನು ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಅಜಯಕುಮಾರ ಸರನಾಯಕ, ಶಾಸಕ ಭೀಮಸೇನ ಚಿಮ್ಮನಕಟ್ಟಿ, ಮಾಜಿ ಸಚಿವ ಎಸ್.ಆರ್. ಪಾಟೀಲ, ಶಾಸಕ ಎಚ್.ವೈ. ಮೇಟಿ, ವಿಧಾನ ಪರಿಷತ್ ಸದಸ್ಯ ಹನಮಂತ ನಿರಾಣಿ, ಮಾಜಿ ಶಾಸಕ ಎಂ.ಕೆ. ಪಟ್ಟಣಶೆಟ್ಟಿ, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಮಹಾಂತೇಶ ಮಮದಾಪೂರ, ಟಿಪಿಸಿಎಂಎಸ್ ಅಧ್ಯಕ್ಷ ಎಸ್.ಆರ್.ಮೆಳ್ಳಿ, ಜಿಲ್ಲಾ ಬಿಜೆಪಿ ಅಧ್ಯಕ್ಷ ಶಾಂತಗೌಡ ಪಾಟೀಲ ಮುಕಾನಿ, ಜಿ.ಪಂ.ಮಾಜಿ ಸದಸ್ಯ ಎಂ.ಬಿ.ಹಂಗರಗಿ, ಜೆಡಿಎಸ್ ಜಿಲ್ಲಾಧ್ಯಕ್ಷ ಹನಮಂತ ಮಾವಿನಮರದ, ಬಸವೇಶ್ವರ ಅರ್ಬನ್ ಬ್ಯಾಂಕ ಅಧ್ಯಕ್ಷ ಪ್ರಕಾಶ ತಪಶೆಟ್ಟಿ ಉದ್ಘಾಟಿಸಲಿದ್ದಾರೆ.

ಸಹಕಾರಿ ಪಿತಾಮಹ ಸಿದ್ಧನಗೌಡರ ಸಣ್ಣರಾಮನಗೌಡ ಪಾಟೀಲ ಅವರ ಭಾವಚಿತ್ರಕ್ಕೆ ಮಾಜಿ ಶಾಸಕ ರಾಜಶೇಖರ ಶೀಲವಂತ ಪುಷ್ಪಾರ್ಪಣೆ ಮಾಡಲಿದ್ದು, ಮುಖ್ಯ ಅತಿಥಿಗಳಾಗಿ ಸಹಕಾರಿ ರಂಗದ ಧುರೀಣರು, ಚುನಾಯಿತ ಪ್ರತಿನಿಧಿಗಳು ಹಾಗೂ ವಿವಿಧ ಕ್ಷೇತ್ರಗಳ ಗಣ್ಯರು ಉಪಸ್ಥಿತರಿರುವರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net