ದೈವಜ್ಞ ಸಮಾಜದ ನೂತನ ಕಟ್ಟಡದ ಉದ್ಘಾಟನೆ

8 vpt. 2
Published on

ವಿರಾಜಪೇಟೆ: ವಿರಾಜಪೇಟೆಯ ಸಮೀಪದ ನಿಸರ್ಗ ಲೇಔಟ್‌ನಲ್ಲಿ ನೂತನವಾಗಿ ನಿರ್ಮಾಣಗೊಂಡ ದೈವಜ್ಞ ಬ್ರಾಹ್ಮಣ ಸಮಾಜದ ಕಟ್ಟಡದ ಪ್ರಾರಂಭೋತ್ಸವ ಕಾರ್ಯಕ್ರಮ ಭಾನುವಾರ ನಡೆಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಶಾಸಕ ಎ.ಎಸ್. ಪೊನ್ನಣ್ಣ ಮಾತನಾಡಿ, ನಾಡಿನ ಎಲ್ಲ ಪ್ರಮುಖ ಕಾರ್ಯಗಳಲ್ಲಿ ದೈವಜ್ಞ ಸಮಾಜದ ಕೊಡುಗೆ ಅತ್ಯಂತ ಮಹತ್ವದ್ದಾಗಿದ್ದು, ಈ ಸಮಾಜದ ಏಳಿಗೆಗಾಗಿ ತನ್ನ ಕೈಲಾದ ಎಲ್ಲ ಸಹಾಯ ಮಾಡಲು ತಾನು ಸಿದ್ಧ ಇರುವುದಾಗಿ ತಿಳಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಗ್ಯಾರೆಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಧರ್ಮಜ ಉತ್ತಪ್ಪ, ಮಾಜಿ ವಿಧಾನಪರಿಷತ್ ಸದಸ್ಯ ಅರುಣ್ ಮಾಚಯ್ಯ, ದೈವಜ್ಞ ಸಮಾಜದ ಅಧ್ಯಕ್ಷರು, ಪದಾಧಿಕಾರಿಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net