

ಶನಿವಾರಸಂತೆ: ಕೊಡ್ಲಿಪೇಟೆ ಕಲ್ಲುಮಠದಲ್ಲಿ ನಿರ್ಮಿಸಿರುವ ನೂತನ ಗದ್ದುಗೆಯನ್ನು ತುಮಕೂರು ಸಿದ್ಧಗಂಗಾ ಮಠದ ಶ್ರೀ ಸಿದ್ಧಲಿಂಗ ಸ್ವಾಮೀಜಿ ಉದ್ಘಾಟಿಸಿದರು.
ಇತ್ತೀಚೆಗೆ ಹಮ್ಮಿಕೊಂಡಿದ್ದ ಕಲ್ಲುಮಠದ ಪೀಠಾಧ್ಯಕ್ಷ ಮಹಂತಸ್ವಾಮಿ ಅವರ ಪೀಠಾರೋಹಣ 50ನೇ ವರ್ಷದ ಪ್ರಯುಕ್ತ ಹಮ್ಮಿಕೊಂಡಿದ್ದ ಕಾರ್ಯಕ್ರಮ ಸಂದರ್ಭ ಗದ್ದುಗೆಯನ್ನು ಉದ್ಘಾಟಿಸಿದರು.
ಗಾವುಡಗೇರಿ ಮಠದ ಶ್ರೀ ನಟರಾಜಸ್ವಾಮಿ, ಹಾಸನ ತಣ್ಣೀರುಹಳ್ಳ ಮಠದ ಶ್ರೀ ವಿಜಯಕುಮಾರಸ್ವಾಮಿ, ಶಿಡುಗಳಲೆ ಮಠದ ಶ್ರೀ ಇಮ್ಮಡಿ ಶಿವಲಿಂಗಸ್ವಾಮಿ, ಕಿರಿಕೊಡ್ಲಿ ಮಠದ ಶ್ರೀ ಸದಾಶಿವಸ್ವಾಮಿ, ತೊರೆನೂರು ಮಠದ ಶ್ರೀ ಮಲ್ಲೇಶಸ್ವಾಮಿ, ಕಲ್ಲಹಳ್ಳಿ ಮಠದ ಶ್ರೀ ರುದ್ರಮುನಿ ಸ್ವಾಮಿ, ಸ್ವಾಗತ ಸಮಿತಿ ಕಾರ್ಯದರ್ಶಿ ಎಸ್.ಮಹೇಶ್ ಇತರರು ಇದ್ದರು.
ಇದೇ ಸಂದರ್ಭ ಕಲ್ಲುಮಠದ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ವಸತಿ ಗೃಹವನ್ನು ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಉದ್ಘಾಟಿಸಿದರು. ಕಲ್ಲುಮಠದ ಶ್ರೀ ಮಹಂತಸ್ವಾಮಿ, ಅರಮೇರಿ ಕಳಂಚೇರಿ ಮಠದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಸೇರಿದಂತೆ ವಿವಿಧ ಮಠಾಧೀಶರು ಇದ್ದರು.